News Kannada
Thursday, August 18 2022

ಮಂಗಳೂರು

ಮಂಗಳೂರು: ಕನ್ನಯ್ಯ ಲಾಲ್ ಹತ್ಯೆಗೈದ ಹಂತಕರಿಗೆ ಮರಣ ದಂಡನೆ ವಿಧಿಸಲು ಶಾಸಕ ವೇದವ್ಯಾಸ್ ಕಾಮತ್ ಆಗ್ರಹ - 1 min read

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಮತಾಂಧ ಮನೋಭಾವ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ. ಇಂತಹ ಭಯೋತ್ಪಾದಕ ಕೃತ್ಯಗಳನ್ನು ರಾಜಕೀಯ ದೃಷ್ಟಿಯಿಂದ ಖಂಡಿಸದಿರುವ ನಾಯಕರ ಓಲೈಕೆಯ ರಾಜಕಾರಣದಿಂದ ಇಂತಹ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹೇಳಿದ್ದಾರೆ.

ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಕಾರಣ. ಜೀವ ಬೆದರಿಕೆಯಿರುವ ಬಗ್ಗೆ ಕನ್ನಯ್ಯ ಲಾಲ್ ದೂರು ನೀಡಿದ್ದರೂ ಸೂಕ್ತ ಭದ್ರತೆ ಕಲ್ಪಿಸದ ರಾಜಸ್ಥಾನ ಸರಕಾರ ಘಟನೆಗೆ ನೇರ ಹೊಣೆಯಾಗಿದೆ. ಹಿಂದುಗಳ ಜೀವವನ್ನು ತೃಣದಂತೆ ಕಾಣುವ ಕಾಂಗ್ರೇಸ್ ನಾಯಕರು ಈ ಘಟನೆಗೆ ಜವಬ್ದಾರರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

See also  ಸಿ.ಎಂ.ಇಬ್ರಾಹಿಂ ಪಕ್ಷ ಬಿಡಲ್ಲ, ಅವನು ನನ್ನ ಸ್ನೇಹಿತ: ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು