News Kannada
Thursday, August 18 2022

ಮಂಗಳೂರು

ಪುತ್ತೂರು: ಹೆಬ್ಬಾವನ್ನು ಕೊಂದ ಇಬ್ಬರು ಆರೋಪಿಗಳು ಬಂಧನ - 1 min read

Two persons arrested for killing python

ಪುತ್ತೂರು: ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ವರ್ಷ) ಮತ್ತು ಜಯ(38 ವರ್ಷ) ರವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಗಳು ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ್ದು ಹಾವು ಸತ್ತಿರುತ್ತದೆ.

ಹೆಬ್ಭಾವನ್ನು ಕೊಲ್ಲುವುದು 1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗುತ್ತದೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ ವೈ.ಕೆ ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿ.ಪಿ ಕಾರ್ಯಪ್ಪ ರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಮ್. ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ ಎಸ್.ಎನ್ ಅರಣ್ಯ ರಕ್ಷಕರುಗಳಾದ ದೀಪಕ್ ,ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಪಾಲ್ಗೊಂಡಿದ್ದರು. ತನಿಖೆ ಪ್ರಗತಿಯಲ್ಲಿದೆ.

See also  16 ನೇ ಕನ್ನಡ ವಿಜ್ಞಾನ ಸಮ್ಮೇಳನಕ್ಕೆ ಮಂಗಳೂರು ವಿವಿಯಲ್ಲಿ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು