ಮಂಗಳೂರು: ಬಿಜೆಪಿ ಈಗ ಭಾರತೀಯ ಜನತಾ ಪಕ್ಷವಾಗಿ ಉಳಿದಿಲ್ಲ , ಬದಲಿಗೆ ಬ್ಯುಸಿನೆಸ್ ಜನತಾ ಪಕ್ಷವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ , ಕಾಂಗ್ರೆಸ್‌ನ ದ.ಕ. ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸನಲ್ಲಿ ಪತ್ರಕಾಗೋಷ್ಠಿಯಲ್ಲಿ ಮಾತನಾಡಿದ ಹಿಂದೆ ಬ್ರಿಟಿಷರು ವ್ಯವಹಾರದ ಕಾರಣಕ್ಕಾಗಿ ಭಾರತಕ್ಕೆ ಬಂದವರು. ಈಗ ಬಿಜೆಪಿ ಕೂಡ ಅದೇ ಹಾದಿಯಲ್ಲಿದೆ.
ಪ್ರಜಾಪ್ರಭುತ್ವ ರೀತಿಯಲ್ಲಿ ಅಧಿಕಾರಕ್ಕೆ ಬಂದ ಸರ್ಕಾರವನ್ನೇ ತೆಗೆಯುವ ಕಾರ್ಯಕ್ಕೆ ಕೈಹಾಕುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ತಮಗಾಗದವರ ವಿರುದ್ಧ ಐಟಇಡಿ ದಾಳಿಯ ಅಸ್ತ್ರ ಬಳಕೆ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ಬದಲಿಸುವ ಅನಿವಾರ್ಯತೆ ಬಂದೊದಗಿದೆ ಕೆಪಿಸಿಸಿ ಉಪಾಧ್ಯಕ್ಷ , ಕಾಂಗ್ರೆಸ್‌ನ ದ.ಕ. ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಹೇಳಿದರು.