News Kannada
Thursday, September 28 2023
ಮಂಗಳೂರು

ಬೆಳ್ತಂಗಡಿ| ರಾಜ್ಯಸಭೆಗೆ ನಾಮನಿರ್ದೇಶನದ ಹಿನ್ನಲೆ: ಹೆಗ್ಗಡೆಯವರಿಗೆ ಅಭಿನಂದನೆಗಳ ಮಹಾಪೂರ

Thank you in Parliament. D. Heggade
Photo Credit :

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಎಂಬ ಚತುರ್ವಿಧ ದಾನ ಪರಂಪರೆಯೊಂದಿಗೆ ಜಾತಿ-ಮತ ಬೇಧವಿಲ್ಲದೆ ಡಿ. ವೀರೇಂದ್ರ ಹೆಗ್ಗಡೆಯವರು ಲೋಕ ಕಲ್ಯಾಣಕ್ಕಾಗಿ ಹಮ್ಮಿಕೊಂಡ ಬಹುಮುಖಿ ಸೇವಾಕಾರ್ಯಗಳನ್ನು ಪರಿಗಣಿಸಿ ಹೆಗ್ಗಡೆಯವರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಅಭಿನಂದಿಸಿ ಹೆಗ್ಗಡೆಯವರ ನಾಮನಿರ್ದೇಶನದಿಂದ ಜೈನಸಮಾಜಕ್ಕೆ ವಿಶೇಷ ಗೌರವ ಬಂದಿದೆ. ಇದು ಸತ್ಕಾರ್ಯಗಳಿಗೆ, ಸಹೃದಯಗಳಿಗೆ ಸಂದ ಗೌರವವಾಗಿದೆ ಎಂದು ಸ್ವಾಮೀಜಿ ಹಾರೈಸಿದ್ದಾರೆ.

ಚಾಮರಾಜನಗರ ಕನಕಗಿರಿ ಜೈನಮಠದ ಪೂಜ್ಯ ಭುವನಕೀರ್ತಿ ಸ್ವಾಮೀಜಿ ಶುಭ ಹಾರೈಸಿ ಪ್ರಧಾನಿ ನರೇಂದ್ರ ಮೋದಿಗೂ, ಹೆಗ್ಗಡೆಯವರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕರು ತಮ್ಮ ಸಂದೇಶದಲ್ಲಿ ಹೆಗ್ಗಡೆಯವರು ರಾಜ್ಯಸಭೆಗೆ ಆಯ್ಕೆಯಾಗಿರುವುದು ಸಕಲ ಕನ್ನಡಿಗರಿಗೆ ಅತೀವ ಸಂತಸವಾಗಿದೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ.

ಹಂಡೆ ಹಾಲು ಕುಡಿದಷ್ಟು ಆನಂದವಾಯಿತು. ಹೆಗ್ಗಡೆಯವರು ಭಾರತರತ್ನ ಭೂಷಿತರಾದಾಗ ಅಮೃತಪಾನದ ದಿವ್ಯಾನುಭೂತಿ ಆಗುತ್ತದೆ. ಹೆಗ್ಗಡೆಯವರಿಗೆ ಅಭಿನಂದನೆಗಳು ಎಂದು ನಾಡೋಜ ಹಂಪನಾ ಮತ್ತು ಕಮಲಾ ಹಂಪನಾ ತಮ್ಮ ಸಂತಸ ವ್ಯಕ್ತ ಪಡಿಸಿದ್ದಾರೆ.

ಧರ್ಮಸ್ಥಳದ ಹಲವು ಮಂದಿ ಅಭಿಮಾನಿಗಳು, ಭಕ್ತರು ಹೆಗ್ಗಡೆಯವರಿಗೆ ದೂರವಾಣಿ ವಿದ್ಯದಂಚೆ, ಟ್ವೀಟ್ ಮೂಲಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ. ಸದ್ಯ ಹೆಗ್ಗಡೆಯವರು ಬೆಂಗಳೂರಿನಲ್ಲಿ ಈಗಾಗಲೇ ಒಪ್ಪಿಕೊಂಡ ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದು ಇದೇ ಹತ್ತರಂದು ಭಾನುವಾರ ಧರ್ಮಸ್ಥಳಕ್ಕೆ ಬರುತ್ತಾರೆ.

ಸರ್ಕಾರ ಒಳ್ಳೆಯ ಜನರ ಸತ್ಕಾರ್ಯವನ್ನು ಗುರುತಿಸಿದ್ದಾರೆ. ಮಹಿಳಾ ಸಬಲೀಕರಣವಾದಾಗ, ಎಲ್ಲಾ ಮಹಿಳೆಯರು ಸ್ವಾವಲಂಬಿಗಳಾದಾಗ ದೇಶ ಸದೃಢವಾಗಿ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಹೇಮಾವತಿ ವೀ. ಹೆಗ್ಗಡೆಯವರು ಅಭಿಪ್ರಾಯಪಟ್ಟಿದ್ದಾರೆ.

ಶಾಸಕ ಹರೀಶ್ ಪೂಂಜ ಕೂಡಾ ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಕೂಡಾ ಹೆಗ್ಗಡೆಯವರನ್ನು ಅಭಿನಂದಿಸಿ ಇನ್ನಷ್ಟು ಜನಮಂಗಲ ಕಾರ್ಯಗಳು ಹೆಗ್ಗಡೆಯವರ ನೇತೃತ್ವದಲ್ಲಿ ನಡೆಯಲಿ ಎಂದು ಹಾರೈಸಿದ್ದಾರೆ.

See also  ಬೆಳ್ತಂಗಡಿ: ೧೫೫೦ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು