News Kannada
Sunday, September 25 2022

ಮಂಗಳೂರು

ಮಂಗಳೂರು| ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಗಾಂಜಾವನ್ನು ಹೊಂದಿದ 12 ವಿದ್ಯಾರ್ಥಿಗಳ ಸೆರೆ - 1 min read

students arrested for possessing ganja
Photo Credit :

ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ರವರ ನೇತ್ರತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ನಗರದ ವೆಲೆನ್ಸಿಯಾ ಸೂಟರ್ ಪೇಟೆ 3 ನೇ ಕ್ರಾಸ್ ನ ವಸತಿಗೃಹವೊಂದಕ್ಕೆ ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಹೊಂದಿದ,ವಿದ್ಯಾರ್ಥಿಗಳನ್ನು ಪೊಲೀಸರು  ಬಂಧಿಸಿದ್ದಾರೆ.

ವಿದ್ಯಾರ್ಥಿಗಳನ್ನು ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ ಟಿ ಪಿ(22), ಫಹಾದ್ ಹಬೀಬ್(22),  ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22), ಎಂದು ಗುರುತಿಸಲಾಗಿದೆ.

ಅವರಿಂದ ಒಟ್ಟು 900 ಗ್ರಾಂ ತೂಕದ ರೂ. 20,000/- ಮೌಲ್ಯದ ಗಾಂಜಾ, ಗಾಂಜಾವನ್ನು ಸೇದುವ ಸ್ಮೋಕಿಂಗ್ ಪೈಪ್, ರೋಲಿಂಗ್ ಪೇಪರ್ ಗಳನ್ನು, ನಗದು ರೂ. 4,500/- ಹಾಗೂ 11 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,85,000/- ಆಗಬಹುದು. ಈ ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಯುವಕರು/ವಿದ್ಯಾರ್ಥಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳನ್ನು ಮಾದಕ ವಸ್ತುಗಳ ಸೇವನೆ ಬಗ್ಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, 11 ಮಂದಿ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿರುತ್ತದೆ. ಆರೋಪಿಗಳು ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಈ ಬಗ್ಗೆ ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು; ಉನ್ನತ ಶಿಕ್ಷಣ ಇಲಾಖೆ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು