ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಅಸಲು ದಾವೆ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರು ಸಿವಿಲ್ ನ್ಯಾಯಾಲಯದ ಪ್ರಶ್ನೆ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮಂಗಳೂರಿನ ತೆಂಕ ಉಳೆಪಾಡಿ ಗ್ರಾಮದ ಧನಂಜಯ ಹಾಗೂ ಬಡಗ ಉಳಿಪಾಡಿ ಗ್ರಾಮದ ಮನೋಜ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿಂದ ಪೀಠ ಶುಕ್ರವಾರ ಪ್ರಕಟಿಸಿದ್ದು ಅರ್ಜಿ ವಜಾಗೊಳಿಸಿ ಆದೇಶಿಸಿದೆ . ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅಸಲು ದಾವೆ ಸಿಂಧುತ್ವದ ಕುರಿತು ವಾದ ಪ್ರತಿವಾದ ಆಲಿಸಿದರು . ಯಾವುದೇ ಆದೇಶ ಹೊರಡಿಸಬಾರದು ಎಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಜೂನ್ ಹದಿಮೂರ ರಂದು ನೀಡಿದ್ದ ಮಧ್ಯಂತರ ಆದೇಶವು ತೆರವು ಗೊಂಡಂತಾಗಿದೆ.
ಮಳಲಿ ಮಸಿದಿ ನವೀಕರಣ ಕಾಮಗಾರಿ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್ ಹಾಗೂ ಮನೋಜ್ ಕುಮಾರ್ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು .ವಿಚಾರಣೆ ನಡೆಸಿದ ಕೋರ್ಟ್ ರಚನೆ ತೆರೆವುಗೊಳಿಸುವಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು ಈ ಮಧ್ಯೆ ಮಸೀದಿಯ ಆಡಳಿತ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿ ವಿವಾದಿತ ಸ್ಥಳ ವಕ್ಫ್ ಆಸ್ತಿಯಾಗಿದೆ .ಜನತೆ ಸಾರ್ವಜನಿಕ ಪೂಜಾ ಸ್ಥಳ ಕಾಯಿದೆ ಅಡಿಯಲ್ಲಿ ಅಸಲು ದಾವೆ ವಿಚಾರಣೆ ಮಾನ್ಯತೆ ಹೊಂದಿಲ್ಲ ಎಂದು ವಾದಿಸಿದ್ದರು ಮತ್ತೊಂದೆಡೆ ಮೂಲ ದಾವೆದಾರರು ಮಧ್ಯಂತರ ಅರ್ಜಿ ಸಲ್ಲಿಸಿ ಮೊದಲು ಕಮಿಷನರ್ ಒಬ್ಬರನ್ನು ನೇಮಕ ಮಾಡಿ ಸ್ಥಳ ಪರಿಶೀಲನೆ ನಡೆಸುವಂತೆ ಕೋರಿದರು ಆದರೆ ಸಿವಿಲ್ ನ್ಯಾಯಾಲಯ ಮೊದಲು ಧಾವಿಸಿದ್ದು ಕುರಿತು ವಿಚಾರಣೆ ಕೈಗೆತ್ತಿಕೊಂಡಿತ್ತು ಇದರಿಂದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಅಸಲು ದಾವೆಯ ವಿಚಾರಣೆ ಮಾನ್ಯತೆ ನಿರ್ಧರಿಸುವ ಮೊದಲು ಸ್ಥಳ ಪರಿಶೀಲನೆ ನಡೆಸಲು ಕೋರ್ಟ್ ಕಮಿಷನರ್ ನೇಮಕ ಮಾಡಬೇಕೆಂಬ ಮನವಿ ಪರಿಗಣಿಸಬೇಕು ಸ್ಥಳ ಪರಿಶೀಲನೆ ನಡೆದು ಮಾಹಿತಿಗಳನ್ನು ರೈ ವೈಜ್ಞಾನಿಕವಾಗಿ ಪಡೆದುಕೊಂಡರೆ ಮಾತ್ರ ಕಟ್ಟಡದ ಇತಿಹಾಸ ಮತ್ತು ಪುರಾತತ್ವ ಪುರಾತನತೆ ಗೊತ್ತಾಗುತ್ತದೆ ಅಸಲು ದಾವೆ ಮತ್ತು ಸ್ಥಳ ಪರೀಶಿಲನೆ ವಿಚಾರ ಬಂದಾಗ ಮೊದಲು ಅಸಲು ದಾವೆ ಅರ್ಜಿಗೆ ಮನ್ನಣೆ ಕೊಡಬೇಕು ಅಥವಾ ಜಿಲ್ಲೆಯ ಮಾನ್ಯತೆ ನೀಡಬೇಕು ಎಂದು ಕಾನೂನಿನಲ್ಲಿ ನಿರ್ದಿಷ್ಟವಾಗಿ ಹೇರಲಾಗಿಲ್ಲ ವೈಜ್ಞಾನಿಕ ವರದಿಯಿಂದ ಇದಕ್ಕೆ ಉತ್ತರ ಸಿಗಲಿದೆ ಇಲ್ಲಿ ಗ್ಯಾನವಾಪಿ ಮಸೀದಿ ಪ್ರಕರಣ ಅನ್ವಯವಾಗುತ್ತದೆ ಈ ಅಂಶಗಳನ್ನು ವಿಚಾರಣೆ ನ್ಯಾಯಾಲಯ ಪರಿಗಣಿಸಿಲ್ಲ ಎನ್ನುವುದು ಅರ್ಜಿದಾರರ ವಾದವಾಗಿತ್ತು.
ಅಸಲು ದಾವೆಯನ್ನು ಆಲಿಸಲು ವಿಚಾರಣಾ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ನಿರ್ಧಾರವಾಗುವ ಮೊದಲು ಕಮಿಷನರ್ ವರದಿಯ ಅಗತ್ಯವಿಲ್ಲ 1ವೇಳೆ ಮೊದಲು ಕಮಿಷನರ್ ನೇಮಿಸಿ ವರದಿ ಬಂದ ನಂತರ ದಾವೆ ಸಿಂಧುತ್ವದ ಬಗ್ಗೆ ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಬಂದರೆ ಕಮಿಷನರ್ ನೇಮಕ ಮಹತ್ತರ ಮತ್ತವರ ವರದಿ ಎರಡಕ್ಕೂ ಮಾನ್ಯತೆ ಇರುವುದಿಲ್ಲ ಆದ್ದರಿಂದ ಮೊದಲು ಅಸಲು ದಾವೆ ಸಿಂಧುತ್ವದ ಬಗ್ಗೆ ನಿರ್ಧಾರವಾಗಬೇಕಿದೆ ಎಂದು ಮಸೀದಿ ಆಡಳಿತ ಮಂಡಳಿಯ ಪರ ವಕೀಲರು ವಾದ ಮಂಡಿಸಿದ್ದರು.