News Kannada
Tuesday, October 03 2023
ಮಡಿಕೇರಿ

ಮಡಿಕೇರಿ: ತಡೆಗೋಡೆ ಕುಸಿಯುವ ಹಿನ್ನೆಲೆಯಲ್ಲಿ ಮಡಿಕೇರಿ-ಮಂಗಳೂರು ರಸ್ತೆ ಬಂದ್

Madikeri: Madikeri-Mangaluru road closed due to collapse of retaining wall
Photo Credit : News Kannada

ಮಡಿಕೇರಿ:  ನಗರದ ಜಿಲ್ಲಾಧಿಕಾರಿ ಕಚೇರಿ ಕೆಳಭಾಗದಲ್ಲಿ ನಿರ್ಮಿಸಲಾಗಿರುವ ತಡೆಗೋಡೆ ಕುಸಿಯುವ ಆತಂಕ ಎದುರಾಗಿದ್ದು, ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಕೆಳಭಾಗದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ತಡೆಗೋಡೆಯನ್ನು ನಿರ್ಮಿಸಲಾಗುತ್ತಿದೆ. ಆದರೆ ಜಿಲ್ಲೆಯಲ್ಲಿ ಸುರಿದ ಆರಂಭಿಕ ಮಳೆಗೇ ಈ ತಡೆಗೋಡೆಯ ತಳಭಾಗ ಉಬ್ಬಿ ಕುಸಿಯುವ ಆತಂಕ ಎದುರಾಗಿದೆ.

ಆದರೆ ಸಂಬಂಧಿಸಿದ ಇಲಾಖೆಯ ಇಂಜಿನಿಯರ್, ತಡೆಗೋಡೆ ಕುಸಿಯುವ ಸಂಭವವಿಲ್ಲ. ಆಧುನಿಕ ತಂತ್ರಜ್ಞಾನದಿಂದ ನಿರ್ಮಿಸಿರುವ ಈ ತಡೆಗೋಡೆ ಕೆಲವು ಇಂಚುಗಳಷ್ಟು ಉಬ್ಬುವುದು ಸಹಜ ಎಂದು ಸಮರ್ಥಿಸಿಕೊಂಡಿದ್ದಾರೆ. ಇದೀಗ ಈ ಉಬ್ಬುವಿಕೆ ಮತ್ತಷ್ಟು ಅಧಿಕವಾಗಿದ್ದು, ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ.

ತಡೆಗೋಡೆ ಕುಸಿಯುವ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಮಂಗಳೂರು ಕಡೆಗೆ ತೆರಳುವ ವಾಹನಗಳನ್ನು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ವೀರಾಜಪೇಟೆಗೆ ತೆರಳುವ ರಸ್ತೆಯ ಮೇಕೇರಿಯಿಂದ ತಾಳತ್’ಮನೆ ಮಾರ್ಗವಾಗಿ ಹಾಗೂ ಮಂಗಳೂರು ರಸ್ತೆಯಿಂದ ಬರುವವರು ತಾಳತ್’ಮನೆ- ಮೇಕೇರಿ- ಮಾರ್ಗವಾಗಿ ಸಂಚರಿಸುವಂತೆ ಸೂಚಿಸಲಾಗಿದೆ.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಸಂಚಾರಿ‌ ಪೊಲೀಸರು ಮಂಗಳೂರು ರಸ್ತೆ ಬಂದ್ ಮಾಡಿ ಪಹರೆ ಕಾಯುತ್ತಿದ್ದಾರೆ.

See also  ಮೈಸೂರು: ಮತ್ತೊಬ್ಬರ ಪ್ರಾಣ ಉಳಿಸಲು ರಕ್ತದಾನ ಮಾಡಿ ಎಂದ ಪ್ರೊ.ಸಾಯಿನಾಥ್ ಮಲ್ಲಿಗೆಮಾಡು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು