ಮಂಗಳೂರು: ಬೆಳ್ಳಾರೆಯಲ್ಲಿ ಮುಸ್ಲಿಂ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಸಂಬಂಧ 8ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ
ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು ಘಟನೆ ನಡೆದ ಇಪ್ಪತ್4ಗಂಟೆಗಳಲ್ಲಿ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಲು ಯಶಸ್ವಿಯಾಗಿದ್ದಾರೆ ಅಭಿಲಾಶ್ ,ಸುನೀಲ್ ,ಸುಧೀರ್ ,ಶಿವ ,ರಂಜಿತ್ ,ಸದಾಶಿವ ,ಜಿಮ್ ರಂಜಿತ್ ,ಭಾಸ್ಕರ ಬಂಧಿತ ಆರೋಪಿಗಳಾಗಿದ್ದು ಎಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದಾರೆ ಇವರ ವಿರುದ್ಧ ವಿವಿಧ ಸೆಕ್ಷನ್ ನಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದರು.
ಜುಲೈ 19 ರಂದು ರಾತ್ರಿ ಹನ್ನೊಂದು ಗಂಟೆಗೆ ಸುಮಾರಿಗೆ ಬೆಳ್ಳಾರೆಯ ಕಳಂಜ ಗ್ರಾಮದ ವಿಷ್ಣು ನಗರದ ಎಂಬಲ್ಲಿ ಈ ಘಟನೆ ನಡೆದಿತ್ತು. ಮಸೂದ್ ತಿಂಗಳ ಹಿಂದೆಯಷ್ಟೇ ಕಾಸರಗೋಡಿನಿಂದ ಅಜ್ಜ ಅಬ್ಬು ಎಂಬವರ ಮನೆಗೆ ಬಂದು ನೆಲೆಸಿದ್ದು ಇಲ್ಲಿಯೇ ಸ್ಥಳೀಯವಾಗಿ ಕೂಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಂಗಳವಾರ ಸಂಜೆ ವಿಷ್ಣು ನಗರದಲ್ಲಿ ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಲು ಮಸೂದೆ ತೆರಳಿದ್ದು ಈ ವೇಳೆ ಅಲ್ಲಿ ಸಮೀಪದ ಅಂಗಡಿಯ ಬಳಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಮಾತಿನ ಚಕಮಕಿ ಹೊಡೆದಾಟ ನಡೆದಿದೆ ಎನ್ನಲಾಗಿದೆ .ಈ ವೇಳೆ ಸುಧೀರ್ ಗೆ ಮಸೂದೆ ಬಾಟಲಿ ತೋರಿಸಿ ಜೀವ ಬೆದರಿಕೆ ಹಾಕಿದ್ದರು.
ಇದೇ ವಿಚಾರವಾಗಿ ರಾತ್ರಿ ಹತ್ತು ಮೂವತ್ತು ರ ಸುಮಾರಿಗೆ ಆರೋಪಿಗಳಾದ ಸುನೀಲ್ ಹಾಗೂ ಅಭಿಲಾಷ್ ಎಂಬವರು ದೂರುದಾರ ಇಬ್ರಾಹಿಂ ಅವರನ್ನು ಸಂಪರ್ಕಿಸಿ ಸುಧೀರ್ ಮೇಲೆ ಹಲ್ಲೆ ನಡೆಸಿದ್ದಾನೆ ಇಲ್ಲಿನ ರಾಜಿ ಮಾತುಕತೆ ಮೂಲಕ ಮುಗಿಸೋಣ ಅದಕ್ಕಾಗಿ ಮಸೂದನನ್ನು ವಿಷ್ಣು ನಗರಕ್ಕೆ ಕರೆದುಕೊಂಡು ಬರುವಂತೆ ಸೂಚಿಸಿದ್ದಾರೆ ಅದರಂತೆ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಮಸೂದೆ ರನ್ನು ಕರಕೊಂಡು ಶಾನಿಫ್ ವಿಷ್ಣು ನಗರಕ್ಕೆ ಬಂದಿದ್ದಾರೆ.
ಈ ವೇಳೆ 8ಮಂದಿ ಆರೋಪಿಗಳು ಏಕಾಏಕಿ ಮಸೂದ್ ಮೇಲೆ ಹಲ್ಲೆ ನಡೆಸಿದ್ದಾರೆ ಈ ವೇಳೆ ಆರೋಪಿ ಅಭಿಲಾಷ್ ಸೋಡಾ ಬಾಟಲಿಯಿಂದ ಮಸೂದೆ ರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಸೂದನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಗಂಭೀರವಾದ ಸ್ಥಳದಲ್ಲಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.