ಮಂಗಳೂರು: ಸೋನಿಯಾ ಗಾಂಧಿ ವಿರುದ್ಧ ಸುಳ್ಳು ಆರೋಪ ಮಾಡಿ ವಿಚಾರಣೆಗೆ ಒಳಪಡಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿಯವರ ಈಡಿ ವಿಚಾರಣೆ ವಿರುದ್ಧ ಕ್ಲಾಕ್ ಟವರ್ ಬಳಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸೋನಿಯಾಗಾಂಧಿ ಅವರಿಗೆ ಪ್ರಧಾನಿಯಾಗಬಹುದಿತ್ತು. ಆದರೆ ಅವರು ನಯವಾಗಿ ತಿರಸ್ಕರಿಸಿದ್ದರು. ಅವರಿಗೆ ಅಧಿಕಾರದ ಆಸೆ ಇರಲಿಲ್ಲ. ಕಾಂಗ್ರೆಸ್ ವರ್ಚಸ್ಸು ಕುಗ್ಗುಸುವ, ಹೆದರಿಸುವ ಪ್ರಯತ್ನವಾಗಿ ಸರಕಾರ ವಿಚಾರಣೆ ಮಾಡುತ್ತಿದೆ. ಈಶ್ವರಪ್ಪ ನವರ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದ್ದಾರೆ. ಬೇಕಾದವರನ್ನು ರಕ್ಷಿಸುತ್ತಿದ್ದಾರೆ. ಬಿಜೆಪಿಯವರ ಮೇಲೆ ಈಡಿ ತನಿಖೆ ನಡೆಯುತ್ತಿಲ್ಲ. ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ ಎಂದು ರಮಾನಾಥ ರೈ ಆರೋಪಿಸಿದರು.
ಬಿಜೆಪಿಯವರು ದೇಶವನ್ನು ಅಧೋಗತಿಗೆ ಕೊಂಡೊಯ್ಯುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿರುವುದು ಖಂಡನೀಯ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.
ಮಾಜಿ ಶಾಸಕರಾದ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ಮೊಯ್ದಿನ್ ಬಾವಾ, ಐವನ್ ಡಿಸೋಜಾ, ಮುಖಂಡರಾದ ಮಿಥುನ್ ರೈ, ಕವಿತಾ ಸನಿಲ್ ಮೊದಲಾದವರು ಭಾಗಿಯಾಗಿದ್ದರು.