ಮಂಗಳೂರು: ಪಾಣೆಮಂಗಳೂರು ಹಾಗೂ ಬಂಟ್ವಾಳ ಮಹಿಳಾ ಕಾಂಗ್ರೆಸ್ ವತಿಯಿಂದ ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ರವರ ನೇತೃತ್ವದಲ್ಲಿ ದಿನಬಳಕೆ ವಸ್ತುಗಳು ಬೆಲೆ ಏರಿಕೆಯ ವಿರುದ್ದ ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧವಾಗಿ ಬಿ. ಸಿ ರೋಡ್ ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಮಹಿಳೆಯರಿಂದ ಬೃಹತ್ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೇಟ್ ಪಿಂಟೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಮತಾ ಗಟ್ಟಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ. ಪೂಜಾರಿ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಲವೀನಾ ವಿಲ್ಮಾ ಮೋರಸ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ವಿ ಶೆಟ್ಟಿ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು, ಪುರಸಭಾ ಸದಸ್ಯರು ಉಪಸ್ಥಿತರಿದ್ದರು.