News Kannada
Saturday, August 13 2022

ಮಂಗಳೂರು

ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದ ಸುನೀಲ್ ಕುಮಾರ್ - 1 min read

The government has taken a serious view of praveen nettaru murder case, says Sunil Kumar

ಮಂಗಳೂರು: ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ರಾಜ್ಯ ಗೃಹಸಚಿವರ ಜತೆ ಚರ್ಚೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ಯುವ ಮುಖಂಡ, ಅಮಾಯಕ ಪ್ರವೀಣ್ ಬೆಳ್ಳಾರೆ ಮೇಲೆ ದಾಳಿ, ಕೊಲೆ ಕೃತ್ಯ ಖಂಡನೀಯ. ಇದನ್ನು ನೋಡಿ ಸರಕಾರ ಸುಮ್ಮನಿರಲು ಸಾಧ್ಯವಿಲ್ಲ. ಘಟನೆ ಬಗ್ಗೆ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಕಲೆ ಹಾಕಿ, ಗೃಹ ಸಚಿವರಿಗೆ ವರದಿ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಶೀಘ್ರ ತಂಡ ರಚಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ಮಟ್ಟಹಾಕುವ ಕೆಲಸವನ್ನು ಸರಕಾರ ಪ್ರಾಮಾಣಿಕವಾಗಿ ಮಾಡಲಿದೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

ಉದ್ವೇಗ ಬೇಡ:

ಪ್ರವೀಣ್ ಹತ್ಯೆ ವಿಚಾರದಲ್ಲಿ ಯಾರೂ ಉದ್ವೇಗಕ್ಕೊಳಗಾಗುವುದು ಬೇಡ. ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಶಾಂತಿ ಪ್ರಿಯರು. ಕೊಲೆ ವಿಚಾರದಲ್ಲಿ ಆರೋಪಿಗಳ ಮಟ್ಟಹಾಕುವ ಪ್ರಯತ್ನ ಶೀಘ್ರದಲ್ಲೇ ಆಗಲಿದೆ ಎಂದರು.

See also  ಸಂಪಾಜೆ ಯಕ್ಷೋತ್ಸವ: ಶ್ರೀ ಕೇಶವಾನಂದ ಭಾರತೀ ಶ್ರಿಪಾದರ ಪುಣ್ಯಸ್ಮೃತಿ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು