News Kannada
Thursday, September 28 2023
ಮಂಗಳೂರು

ಮಂಗಳೂರು: ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Chief Minister Basavaraj Bommai said that action will be taken till the case is solved.
Photo Credit : News Kannada

ಮಂಗಳೂರು: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಭಾರತೀಯ ಜನತಾ ಪಕ್ಷದ ವತಿಯಿಂದ 25 ಲಕ್ಷ ಗಳನ್ನು ಪರಿಹಾರವಾಗಿ ನೀಡಲಾಗಿದೆ.

ಪ್ರವೀಣ್ ಕುಟುಂಬದವರಿಗೆ ಪಕ್ಷ ಮತ್ತು ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಅವರ ಜೀವನದ ಮುಂದಿನ ಭವಿಷ್ಯಕ್ಕೆ ಸಹಕಾರ ನೀಡಲಾಗುವುದು. ಪ್ರವೀಣ್ ಆತ್ಮಕ್ಕೆ ಕೊಲೆಗೈದವರ ಶಿಕ್ಷೆಯಾದಾಗ ಮಾತ್ರ ಶಾಂತಿ ದೊರಕಲಿದೆ. ಪ್ರವೀಣ್ ಕುಟುಂಬದವರು ಇದೇ ಮಾತನ್ನು ಹೇಳಿದ್ದಾರೆ. ಇನ್ನೆಂದೂ ಈ ರೀತಿ ಯಾರಿಗೂ ಆಗಬಾರದು , ಇದರ ಹಿಂದಿರುವ ಸಂಘಟನೆಗಳ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಕಟುಕರಿಗೆ ಶಿಕ್ಷೆ ಆಗುವ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು ಎಂದರು.

ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಿದೆ:

ಇದೊಂದು ಪೂರ್ವಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ. ಮೊನ್ನೆ ನಡೆದ ಪ್ರವೀಣ್ ಹತ್ಯೆ ಪ್ರಕರಣ ಖಂಡನೀಯ. ಕಳೆದ ಹತ್ತು ವರ್ಷಗಳಲ್ಲಿ ಈ ಭಾಗದಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿದೆ. ಸಮಾಜಘಾತುಕ ಶಕ್ತಿಗಳು ಬೆಂಬಲ ನೀಡಿರುವುದುರಿಂದ ನಿರ್ಭೆಡೆಯಿಂದ ಈ ಘಟನೆಯನ್ನು ನಡೆಸಲಾಗಿದೆ.

ಇದನ್ನು ನಾವು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ. ದೇಶವನ್ನು ಛಿದ್ರ ಮಾಡುವ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲಾಗಿದೆ. ತನಿಖೆ ಪ್ರಾರಂಭವಾಗಿದೆ. ಆರೋಪಿಗಳು ರಾಜ್ಯದ ಗಡಿ ದಾಟಿರಬಹುದು. ಈ ಎಲ್ಲ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ, ಕೆಲವರನ್ನು ವಶಕ್ಕೆ ತೆಗೆದುಕೊಂಡು, ಅವರಿಂದ ಪಡೆದ ಮಾಹಿತಿಯಿಂದ ತನಿಖೆ ಮುಂದುವರೆಯಲಿದೆ. ಅತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ವಿಶ್ವಾಸವಿದೆ. ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಕಳೆದ ಹಲವಾರು ವರ್ಷಗಳಿಂದ ದುಷ್ಕøತ್ಯಗಳಲ್ಲಿ ತೊಡಗಿಕೊಂಡಿರುವ ಸಮಾಜಘಾತುಕ ಶಕ್ತಿಗಳ ಜಾಡು ಹಿಡಿದು, ಈ ದಿಸೆಯಲ್ಲಿಯೂ ತನಿಖೆ ಕೈಗೊಂಡು ಹಿಂದಿರುವ ಸಂಘಟನೆಗಳನ್ನು ಗಮನಿಸುತ್ತಿದ್ದೇವೆ ಎಂದರು.

ಕರ್ನಾಟಕಕ್ಕೆ ಎನ್ ಐ ಎ ಅಗತ್ಯವಿದೆ :

ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ ಐ ಎ ಯ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಪ್ರಾಥಮಿಕ ತನಿಖಾ ವರದಿಯ ಆಧಾರವಾಗಿ ಹೆಚ್ಚುವರಿ ತನಿಖೆಯ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗುವುದು. ಈ ಘಟನೆಗೆ ಬೆಂಬಲ ನೀಡಿರುವ ಬಗ್ಗೆಯೂ ತನಿಖೆ ನಡೆಸಿ , ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಜಾಲವನ್ನು ಭೇಧಿಸಲಾಗುವುದು. ಪಿಎಫ್‍ಐ ಬ್ಯಾನ್ ಮಾಡಲು ಕ್ರಮಗಳು ಪ್ರಾರಂಭವಾಗಿದೆ. ಈ ರೀತಿಯ ದುಷ್ಕøತ್ಯಗಳು ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿದ್ದು, ದೇಶದ ಮಟ್ಟದಲ್ಲಿ ಸರಿಯಾದ ಕ್ರಮವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

See also  ಸ್ನೇಹಿತರ ನಡುವೆ ಕ್ಷುಲಕ ಕಾರಣಕ್ಕೆ ಜಗಳ: ಚೂರಿ ಇರಿತದಿಂದ ಇಬ್ಬರಿಗೆ ಗಾಯ

ಮಸೂದ್ ಹತ್ಯೆಗೂ ಹಾಗೂ ಪ್ರವೀಣ್ ಹತ್ಯೆಗೂ ಸಂಬಂಧವಿದೆಯೇ ಎಂಬ  ತನಿಖೆಯಿಂದ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯ ವೈಫಲ್ಯವಾಗಿದ್ದರೆ ಅದನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು