ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಲಾಠಿಚಾರ್ಜ್ ಹಿನ್ನೆಲೆ ಕೊನೆಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ದ.ಕ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ಸೈಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್ ಹಾಗೂ ಸುಬ್ರಹ್ಮಣ್ಯಕ್ಕೆ ಮಂಜುನಾಥ್ ನೇಮಕ ಮಾಡಲಾಗಿದೆ.
ಕುಂದಾಪುರ ಎಸೈ ಆಗಿದ್ದ ಸುಹಾಸ್ ಬೆಳ್ಳಾರೆ ಠಾಣೆಗೆ. ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ. ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.
ವರ್ಗಾವಣೆಯಾದ ಪಿಎಸ್ಸೈಗಳಿಗೆ ಜಾಗ ತೋರಿಸದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ಮಾಡಲು ಸೂಚನೆ ನೀಡಲಾಗಿದೆ.
ಕಾಸರಗೋಡಿನ ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ರಮೇಶ್ ಮೇಲೂ ಪೊಲೀಸರು ಲಾಠಿ ಬೀಸಿದ್ದು, ಪೊಲೀಸರ ಮೇಲೆ ಕ್ರಮ ಕೈಗೊಳ್ಳದ ಹಿನ್ನೆಲೆ ನಿನ್ನೆ ಸಿಎಂ ಬೊಮ್ಮಾಯಿಗೂ ಕಾರ್ಯಕರ್ತರು ಧಿಕ್ಕಾರ ಕೂಗಿದ್ದರು.