News Kannada
Wednesday, August 10 2022

ಮಂಗಳೂರು

ಮಂಗಳೂರು: ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ - 1 min read

Mangaluru: A peace meeting will be held at dakshina Kannada deputy commissioner's office today.

ಮಂಗಳೂರು: ಬೆಳ್ಳಾರೆ ಹಾಗೂ ಸುರತ್ಕಲ್ ಪರಿಸರದಲ್ಲಿ ನಡೆದ ಬರ್ಬರ ಹತ್ಯೆಗಳ ಬೆನ್ನಿಗೇ ಕರಾವಳಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಂತಿ ಸಭೆ ಆಯೋಜಿಸಿದೆ.

ಈ ನಡುವೆ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಲ್ಲಿ ಆ.6ರವರೆಗೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಊಹಾಪೋಹಗಳಿಗೆ ಕಿವಿಗೊಡಬೇಡಿ
ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಸೆಕ್ಷನ್ 144 ಜಾರಿಯಲ್ಲಿರಲಿದೆ. ಅಲ್ಲದೆ ಮಂಗಳೂರು ತಾಲೂಕಿನ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ನಿಷೇಧಾಜ್ಞೆ ಇರಲಿದೆ. ಜನತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಒತ್ತು ನೀಡ
ಬೇಕು. ಯಾವುದೇ ಊಹಾಪೋಹಗಳಿಗೆ ಕಿವಿಗೊಡ ಬಾರದೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸಭೆ ಸಮಾರಂಭಗಳಿಗೆ ನಿಷೇಧ                                                                                                                     ಜನತೆ ಗುಂಪು ಗುಂಪಾಗಿ ಓಡಾಡುವುದು, ವಿನಾ ಕಾರಣ ತಿರುಗಾಡುವುದಕ್ಕೆ ಅವಕಾಶವಿಲ್ಲ. ಪ್ರತಿಭಟನೆ, ಮೆರವಣಿಗೆ, ವಿಜಯೋತ್ಸವ, ಸಾರ್ವಜನಿಕ ಸಭೆ ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ ಎಂದವರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಮೂಲ್ಕಿ, ಪಣಂಬೂರು ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಗುರುವಾರ ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಲ್ಲಿದೆ. ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ಮುಹಮ್ಮದ್ ಫಾಝಿಲ್ ಎಂಬ ಯುವಕನ ಹತ್ಯೆಯಾದ ಬಳಿಕ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಹೊರಡಿಸಿದ್ದಾರೆ.

See also  ಕೋಮುವಾದಿ ಬಿಜೆಪಿ-ಆರೆಸ್ಸೆಸ್ನಿಂದ ಸಮಾಜ ಒಡೆಯುವ ಕೆಲಸ; ಮಹಮ್ಮದ್ ಹ್ಯಾರೀಸ್ ನಲಪ್ಪಾಡ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು