News Kannada
Friday, September 29 2023
ಮಂಗಳೂರು

ಉಳ್ಳಾಲದಲ್ಲಿ ಓರ್ವ ವ್ಯಕ್ತಿ ಮೇಲೆ ದಾಳಿ ಆಗಿದೆ ಎಂಬ ಸುದ್ದಿಗೆ ಸ್ಪಷ್ಟನೆ ನೀಡಿದ ಎನ್. ಶಶಿಕುಮಾರ್

On the news that a person was attacked in Ullal, N. Sasikumar
Photo Credit : News Kannada

ಮಂಗಳೂರು: ಕರಾವಳಿಯಲ್ಲಿ ಮತ್ತೆ ಆತಂಕಕ್ಕೆ ಕಾರಣವಾಗಿದ್ದ ‘ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಯತ್ನ’ ವದಂತಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ ನೀಡಿದ್ದು, ಇದು ಕೇವಲ ವದಂತಿಯಾಗಿದೆ, ಇದರಲ್ಲಿ ಸತ್ಯಾಂಶವಿಲ್ಲ ಎಂದಿದ್ದಾರೆ.

‘ಹಲ್ಲೆ’ ನಡೆದಿದೆ ಎನ್ನಲಾದ ವ್ಯಕ್ತಿಯನ್ನು ವಿಚಾರಿಸಲಾಗಿದೆ. ಈ ಬಗ್ಗೆ ಆ ವ್ಯಕ್ತಿಯೇ ಇದೊಂದು ವದಂತಿ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಉಳ್ಳಾಲದ ಬಿಜೆಪಿ ಕಾರ್ಯಕರ್ತರೋರ್ವರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅವರ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ಯತ್ನ ನಡೆಸಿದ್ದರು ಎಂದು ಹಬ್ಬುತ್ತಿರುವ ಸುದ್ದಿ ಈಗಷ್ಟೇ ತಣ್ಣಗಾಗುತ್ತಿರುವ ಕರಾವಳಿಯಲ್ಲಿ ಮತ್ತೆ ಕಾವೇರಲು ಕಾರಣವಾಗಿತ್ತು. ಈ ವದಂತಿ ಹರಡಿದವರ ಬಗ್ಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

See also  ಜೆಪ್ಪು ಆಶ್ರಮ: ಸಂತ ಆಂತೋನಿಯವರ ವಾರ್ಷಿಕ ಮಹೋತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು