News Kannada
Thursday, August 11 2022

ಮಂಗಳೂರು

ಮಂಗಳೂರು: ಜಿಲ್ಲೆಯಾದ್ಯಂತ ಆ. 3ರಿಂದ 5ರವರೆಗೆ ನಿರ್ಬಂಧ ಜಾರಿಗೊಳಿಸಿ ಡಾ. ರಾಜೇಂದ್ರ ಕೆ.ವಿ - 1 min read

Shops will be allowed to remain open in the district from tomorrow till 9 pm.

ಮಂಗಳೂರು: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಭಾರತೀಯ ದಂಡ ಪ್ರಕ್ರಿಯಾ ಸಂಹಿತ 1973 ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿಕೊಂಡು  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ “ದಿನಾಂಕ 03.08.2022 ರಿಂದ ದಿನಾಂಕ: 05-08-2022 ರವರೆಗೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಈ ಕೆಳಕಂಡ ನಿರ್ಬಂಧಗಳನ್ನು  ಜಾರಿಗೊಳಿಸಿ ಆದೇಶಿಸಿದೆ.

1. ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನಾಂಕ’ 03-08-2012 ರಿಂದ ದಿನಾಂಕ: 05-08-2022 ರವರೆಗೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚುವುದು.

2. ಮಾಲ್, ಚಿತ್ರಮಂದಿರಗಳು / ಸಿನೆಮಾ ಹಾಲ್, ಪಬ್ ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನಾಂಕ: 03-08-2002 ರಿಂದ ದಿನಾಂಕ: 05-08-2022 ರವರೆಗೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚುವುದು.

3. ಸಾರ್ವಜನಿಕರು ತುರ್ತು ಮತ್ತು ಅವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ವಸತಿ ಸಮುಚ್ಚಯದಿಂದ ಹೊರಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಿದೆ.

4. ತುರ್ತು ಸಂದರ್ಭಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅವಶ್ಯಕವೆಂದು ಕಂಡುಬಂದಲ್ಲಿ ಮಾತ್ರ ಬಸ್ಸು, ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ವಾಹನಗಳನ್ನು ಬಳಸಲು ಅವಕಾಶ ನೀಡಲಾಗಿದೆ.

5. ಅನಗತ್ಯ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ.

6 : ಜಿಲ್ಲೆಯಲ್ಲಿ ಎಲ್ಲಾ ಸಭೆ ಸಮಾರಂಭಗಳನ್ನು ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ ಜಾತ್ರೆಗಳನ್ನು ಮುಂದೂಡುವುದು.

7. ಜಿಲ್ಲೆಯಲ್ಲಿ ಈಗಾಗಲೇ ನಿಗದಿಪಡಿಸಲಾಗಿರುವ ಖಾಸಗಿ ಸಮಾರಂಭಗಳನ್ನು ಮುಂದೂಡುವುದು.

8. ಹೊಟೇಲ್‌, ಪಾರ್ಸೆಲ್‌ ವ್ಯವಸ್ಥೆ, ತುರ್ತು ವ್ಯವಸ್ಥೆಗಳಿಗೆ ಮಾತ್ರ ಅವಕಾಶವಿರುತ್ತದೆ.

9. ಜಿಲ್ಲೆಯ ಎಲ್ಲಾ ಸಂಧ್ಯಾ ಕಾಲೇಜುಗಳಿಗೆ 2 ದಿನಗಳ ರಜೆಯನ್ನು ಘೋಷಿಸಲಾಗಿದೆ.

10. ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುವುದು.

11. ಜಿಲ್ಲೆಯಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆಯವರು ಸೂಕ್ತ ಗಸ್ತು ವ್ಯವಸ್ಥೆಯನ್ನು ಮಾಡತಕ್ಕದ್ದು.

ಈ ಆದೇಶವನ್ನು ದಿನಾಂಕ 03.08.2022 ರಂದು ಹೊರಡಿಸಲಾಗಿದೆ.

See also  ಅಂಗವೈಕಲ್ಯವನ್ನು ಮೀರಿ ನಿಂತು ಸಾಧನೆ ಗೈದ ಕೌಶಿಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು