ಮಂಗಳೂರು: ಸೋದರತ್ತೆ ಸಹಿತ ಅವರ ಕುಟುಂಬದ ನಾಲ್ವರನ್ನು 1994ರಲ್ಲಿ ವಾಮಂಜೂರಿನಲ್ಲಿ ಹತ್ಯೆ ಮಾಡಿದ ಪ್ರವೀಣ್ ಕುಮಾರನನ್ನ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಸರಕಾರ ಸಿದ್ಧತೆ ನಡೆಸುತ್ತಿದ್ದು ಇದಕ್ಕೆ ಸಂತ್ರಸ್ತರ ಕುಟುಂಬದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈತನನ್ನು ಬಿಡುಗಡೆ ಮಾಡುವ ಕುರಿತು ಬಂಧುಗಳ ಅಭಿಪ್ರಾಯ ಪಡೆಯಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ . ಪ್ರವೀಣನನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಸಂತ್ರಸ್ತರ ಕುಟುಂಬದವರು ನಿರ್ಧರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೆರಿಯಡ್ಕ ನಿವಾಸಿ ಪ್ರವೀಣ್ ಕುಮಾರ್ 1994ಫೆಬ್ರವರಿ ಇಪ್ಪತ್ಮೂರರ ಮಧ್ಯರಾತ್ರಿ ವಾಮಂಜೂರು ನನ್ನಲ್ಲಿದ್ದ ತನ್ನ ಅತ್ತೆ ತಂದೆಯ ತಂಗಿ ಅಪ್ಪಿ ಶೇರಿಗಾರ್ತಿ ಅವರ ಪುತ್ರ ಗೋವಿಂದಾ ಪುತ್ರಿ ಶಕುಂತಲಾ ಹಾಗೂ ಶಕುಂತಲಾ ರ ಪುತ್ರಿ ದೀಪಿಕಾಳನ್ನು ಕೊಲೆ ಮಾಡಿದ್ದ , ಈ ಪ್ರಕರಣ ದೇಶದಲ್ಲೇ ದೊಡ್ಡ ಸಂಚಲನ ಮೂಡಿಸಿತ್ತು ಕೆಳಹಂತದ ನ್ಯಾಯಾಲಯ ದಿಂದ ಹಿಡಿದು ಸುಪ್ರೀಂ ಕೋರ್ಟ್ ನಲ್ಲೂ ಪ್ರವೀಣ್ ಮೇಲಿನ ಆರೋಪ ಸಾಬೀತಾಗಿತ್ತು.
2003ರಲ್ಲಿ ಸುಪ್ರೀಂಕೋರ್ಟ್ ಈತನಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿತ್ತು , ಇದನ್ನು ಪ್ರಶ್ನಿಸಿದ್ದ ಪ್ರವೀಣ್ ಕ್ಷಮಾದಾನ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದು ಅದು ಹತ್ತು ವರ್ಷಗಳ ಕಾಲ ವಿಲೇವಾರಿಯಾಗದೆ ಬಾಕಿ ಉಳಿದಿತ್ತು ಈ ನಡುವೆ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯನ್ನು ಹೊಂದಿದ್ದ ಮೂವರು ಗಲ್ಲು ಶಿಕ್ಷೆ ರದ್ದು ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿತ್ತು . ಇದನ್ನೇ ಆಧಾರವಾಗಿಟ್ಟುಕೊಂಡು ಪ್ರವೀಣ್ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದ. ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸಿದೆ.
ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಪ್ರವೀಣನನ್ನು ಸನ್ನಡತೆ ಕಾರಣ ಬಿಡುಗಡೆ ಮಾಡುವ ಕುರಿತು ಅಭಿಪ್ರಾಯ ವರದಿಯನ್ನು ಸಂಗ್ರಹಿಸಲು ಜಿಲ್ಲಾ ಎಸ್ಪಿ ಕಚೇರಿಗೆ ಜುಲೈ 21ರಂದು ರಾಜ್ಯ ಕಾರ್ಯಾಗಾರ ಮತ್ತು ಸುಧಾರಣಾ ಇಲಾಖೆಯಿಂದ ಆದೇಶ ಮಾಡಲಾಗಿದೆ ಇದಕ್ಕೆ ಸಂತ್ರಸ್ತ ಕುಟುಂಬದವರ ಪರವಾಗಿ ಗುರುಪುರದ ಸೀತರಾಮ್ ಅವರ ಆತಂಕ ಹಾಗೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಣದ ಆಸೆಗಾಗಿ ಬಾಲಕಿ ಸಹಿತ ನಾಲ್ವರನ್ನು ಅಮಾನುಷವಾಗಿ ಕೊಲೆಗೈದಿರುವ ಆತ ಜೈಲಿನಿಂದ ಹೊರಬಂದರೆ ಸಮಾಜಕ್ಕೆ ಅಪಾಯವಿದೆ ಸ್ವತಃ ಆತನ ಕುಟುಂಬದವರಿಗೂ ಅವನ ಬಂಧನ ಮುಕ್ತವಾಗುವುದರ ಬಗ್ಗೆ ಆತಂಕವಿದೆ ಆತನನ್ನು ಬಿಡುಗಡೆ ಮಾಡಬಾರದು ಇಂಥ ವ್ಯಕ್ತಿಯನ್ನು ಬಿಡುಗಡೆ ಮಾಡುವುದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸಕ್ಕೆ ಅವಮಾನ ಎಂದು ತಿಳಿಸಿದ್ದಾರೆ.