News Kannada
Sunday, October 02 2022

ಮಂಗಳೂರು

ಮಂಗಳೂರು: ಡಾ.ಹೆಗ್ಗಡೆಯವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಗೌರವ - 1 min read

Mangaluru: Dr Heggade honoured by the Federation of Global Bunts Associations
Photo Credit : By Author

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯ ಸಭೆಗೆ ನಾಮನಿರ್ದೇಶನಗೊಳಿಸಿದ ಹಿನ್ನೆಲೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಒಕ್ಕೂಟದ ಪದಾಧಿಕಾರಿಗಳು ಹೆಗ್ಗಡೆಯವರ ನಿವಾಸ (ಬೀಡು) ನಲ್ಲಿ ಭೇಟಿ ಮಾಡಿ ಗೌರವ ಸಲ್ಲಿಸಿದರು.

ಸದಾ ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗಮನ ಸೆಳೆದಿರುವ ಹೆಗ್ಗಡೆ ಅವರನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ಗುರುತಿಸಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿರುವುದು ಅಭಿನಂದನಾರ್ಹ. ಧರ್ಮ ಸಮನ್ವಯತೆಗೆ ಹೆಗ್ಗಡೆ ಅವರ ಕೊಡುಗೆ ಮಹತ್ತರವಾದದು. ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮಕರಣ ಮಾಡಿರುವುದು ಸಮಾಜಕ್ಕೆ ಹೆಮ್ಮೆ ಹಾಗೂ ಸಂಭ್ರಮದ ವಿಚಾರವಾಗಿದೆ. ಇದರಿಂದ ತುಳುನಾಡಿಗೆ ಹರ್ಷ ತಂದಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಒಕ್ಕೂಟದ ನೂತನ ನಿರ್ದೇಶಕ ಶಶಿಧರ ಶೆಟ್ಟಿ ಬರೋಡ, ರವಿ ಶೆಟ್ಟಿ ಜತ್ತಬೆಟ್ಟು, ಮಾಜಿ ಸಚಿವ ಅಭಯಚಂದ್ರ ಜೈನ್ ಉಪಸ್ಥಿತರಿದ್ದು, ಡಾ.ಹೆಗ್ಗಡೆ ಅವರನ್ನು ಅಭಿನಂದಿಸಿದರು.

See also  ಬೆಳ್ತಂಗಡಿ: ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು