ಮಂಗಳೂರು: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬೆಳಗ್ಗೆ 7 ಗಂಟೆಗೆ ತಲಪಾಡಿ ಚೆಕ್ಪೋಸ್ಟ್ ಬಳಿ ಬಂಧಿಸಿದ್ದೇವೆ ಎಂದು ನಗರದಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬಂಧಿತರು ಶಿಯಾಬುದ್ದೀನ್ ಅಲಿ(33), ರಿಯಾಜ್(27) ಹಾಗೂ ಎಲಿಮಲೆಯ ಬಶೀರ್(29) ಎನ್ನಲಾಗಿದೆ.
ಪ್ರಕರಣದ ಕುರಿತು ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಮೂವರು ಪದೇ ಪದೇ ತಮ್ಮ ವಾಸ ಸ್ಥಾನವನ್ನು ಬಳಲಿಸಿಕೊಳ್ಳುತ್ತಿದ್ದರು ಅಲ್ಲದೆ ಅವರ ಶೋಧ ಕಾರ್ಯಕ್ಕೆ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು, ಖಚಿತ ಮಾಹಿತಿ ಪಡೆದುಕೊಂಡ ಪೋಲೀಸರ ತಂಡ ಇಂದು(ಗುರುವಾರ) ಆರೋಪಿಗಳನ್ನು ತಲಪಾಡಿಯ ಬಳಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ವಶಕ್ಕೆ ಪಡೆಯಲಾಗುವುದು, ಮಹಜರು, ಕೊಲೆಯಲ್ಲಿ ಬಳಸಿದ ವಾಹನ, ಆಯುಧಗಳನ್ನು ವಶಕ್ಕೆ ಪಡೆದ ಬಳಿಕ ಎನ್‌ಐಎಗೆ ಈ ಪ್ರಕರಣದ ತನಿಖೆಯನ್ನು ಹಸ್ತಾಂತರ ಮಾಡಲಾಗುವುದು ಎಂದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.