ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಶುಕ್ರವಾರ ಅಮೃತ ಶೋಭಾಯಾತ್ರೆಯು ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಶೋಭಾಯಾತ್ರೆಗೆ ಚಾಲನೆ ನೀಡಿದರು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಶ್ರೀರಾಮ ವಿದ್ಯಾಕೇಂದ್ರಗಳ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್, ಆಡಳಿತ ಮಂಡಳಿ ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕರು, ಸಿಬಂದಿ, ಪೋಷಕರು ಪಾಲ್ಗೊಂಡಿದ್ದರು.
ಶ್ರೀರಾಮ ವಿದ್ಯಾಕೇಂದ್ರಗಳ ಶಿಶು ಮಂದಿರ, ಪ್ರಾಥಮಿಕ, ಪ್ರೌಢ, ಸೆಕೆಂಡರಿ ಸ್ಕೂಲ್, ಪಿಯುಸಿ ಹಾಗೂ ಪದವಿ ಕಾಲೇಜುಗಳ ಸುಮಾರು ೩೫೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿವಿಧ ಸ್ತಬ್ದಚಿತ್ರಗಳು ಶೋಭಾಯಾತ್ರೆಯಲ್ಲಿ ಗಮನ ಸೆಳೆದವು.