ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಟದ ಕೂಟ ಸಮಿತಿ ವತಿಯಿಂದ ಪಂಜಿಕಲ್ಲು ಬಾಲೇಶ್ವರ ಗರಡಿ ಗದ್ದೆಯಲ್ಲಿ ಭಾನುವಾರ ಆಟಿಡ್ ಕೆಸರ್ಡ್ ಒಂಜಿ ದಿನ ಎಂಬ ಕಾರ್ಯಕ್ರಮ ನಡೆಯಿತು.
ಬಾಲೇಶ್ವರ ಬಸದಿಯಲ್ಲಿ ಪೂಜೆ ಸಲ್ಲಿಸಿ, ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಟದ ಗದ್ದೆಯಲ್ಲಿ ಕಂಬಳ ಕೋಣ ಇಳಿಸುವ ಮೂಲಕ ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಚಾಲನೆಯನ್ನು ನೀಡಿದ ಮಾಜಿ ಸಚಿವ ರೈ, ಬಳಿಕ ವೇದಿಕೆಯಲ್ಲಿ ಗಣ್ಯರ ಸಮಕ್ಷಮ ಹಿಂಗಾರ ಅರಳಿಸಿದರು.
ಸಾಮಾಜಿಕ ಪರಿವರ್ತನೆ ಬಳಿಕ ಉತ್ತಮ ಜೀವನ ಸಾಗಿಸುತ್ತಿದ್ದು, ಹಿಂದಿನ ನೆನಪು ಮರೆಯಬಾರದು ಎಂಬ ಕಾರಣಕ್ಕೆ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ರಮಾನಾಥ ರೈ ಆಶಯ ನುಡಿಗಳನ್ನಾಡಿದರು.
ಸಮಿತಿ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಪ್ರಾಸ್ತಾವಿಕ ಮಾತನಾಡಿ, ತುಳುನಾಡ ಒಗ್ಗಟ್ಟಿಗೆ ಮಾಜಿ ಸಚಿವ ರಮಾನಾಥ ರೈ ನೀಡಿದ ಮಾರ್ಗದರ್ಶನವನ್ನು ಸ್ಮರಿಸಿ, ಸ್ವಾತಂತ್ರ್ಯದ ಅಮೃತಮಹೋತ್ಸವ ಸಂದರ್ಭ ಇತಿಹಾಸವನ್ನು ನೆನಪಿಸುವ ಕೆಲಸ ಆಗಬೇಕು ಎಂದರು.
ಪ್ರಧಾನ ಕಾರ್ಯದರ್ಶಿ ಸುದರ್ಶನ ಜೈನ್ ಸ್ವಾಗತಿಸಿದರು. ಕೋಶಾಧಿಕಾರಿ ದೇವಪ್ಪ ಕುಲಾಲ್ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಸಂಚಾಲಕರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಡಿ.ಎಸ್. ಗಟ್ಟಿ, ಎಂ.ಎಸ್. ಮಹಮ್ಮದ್, ಮಲ್ಲಿಕಾ ಪಕ್ಕಳ, ಜಯಂತಿ ಪೂಜಾರಿ, ಅಮ್ಮು ರೈ, ಅಬ್ಬಾಸ್ ಆಲಿ ಬೋಳಂತೂರು, ರಮೇಶ್ ನಾಯಕ್ ರಾಯಿ, ಎಡ್ತೂರು ರಾಜೀವ ಶೆಟ್ಟಿ, ಪದ್ಮನಾಭ ರೈ, ಸುರೇಶ್ ಜೋರ, ಪ್ರಕಾಶ್ ಕುಮಾರ್ ಜೈನ್, ಕೃಷ್ಣರಾಜ ಜೈನ್, ಸೀತಾರಾಮ ಶೆಟ್ಟಿ ಕಾಂತಾಡಿ, ದಿನೇಶ್ ಶೆಟ್ಟಿ, ಕೇಶವ ಪೂಜಾರಿ, ಪದ್ಮರಾಜ ಬಲ್ಲಾಳ್, ಸದಾನಂದ ಶೆಟ್ಟಿ, ಸುರೇಶ್ ಶೆಟ್ಟಿ, ಮೋಹನ ಗೌಡ ಕಲ್ಮಂಜ, ಗಂಗಾಧರ ಪೂಜಾರಿ, ಲೋಲಾಕ್ಷ ಶೆಟ್ಟಿ, ವಾಸು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.