ಮಂಗಳೂರು: ಆ.24 ರಂದು ದಕ್ಷಿಣ ಒಳನಾಡಿನ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೂ ಯೆಲ್ಲೊಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಉಳಿದಂತೆ ದಕ್ಷಿಣ ಒಳನಾಡಿನ ಕೆಲವು ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಆದರೆ ಯಾವುದೇ ಅಲರ್ಟ್ ನೀಡಿಲ್ಲ.
ಕೇರಳದ ಐದು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
ಕೇರಳದಲ್ಲಿಇದೇ ರೀತಿಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಆ.26ರ ತನಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಂತೆ ವಿವಿಧ ಜಿಲ್ಲೆಗಳಲ್ಲಿ ವಿವಿಧ ದಿನಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಹತ್ತಾರು ವರ್ಷಗಳಿಗೆ ಹೋಲಿಸಿದಲ್ಲಿ ಈ ಬಾರಿ ಹಿಂದಿನ ವಾಡಿಕೆ ಮಳೆಗಿಂತ ಈ ಬಾರಿ 10 ಪಟ್ಟು ಮಳೆ ಹೆಚ್ಚಿದೆ. ರೈತರ ಬೆಳೆ ನಷ್ಟವಾಗಿದೆ. ಮನೆಗಳು ಹಾಳಾಗಿವೆ. ಬೇಡಿಕೆಗೆ ಅನುಗುಣವಾಗಿ ಪರಿಹಾರ ವಿತರಣೆ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಪ್ರಾಣ ಹಾನಿಗೆ ಒಳಗಾದ ಕುಟುಂಬದವರಿಗೆ ಮೂರು ದಿನಗಳಲ್ಲಿ5 ಲಕ್ಷ ಪರಿಹಾರ ಕೊಡಲಾಗಿದೆ. ಜಾನುವಾರುಗಳು ಮೃತ ಪಟ್ಟ ಕುಟುಂಬಗಳಿಗೆ ಪರಿಹಾರ ಕೊಡಲಾಗುತ್ತಿದೆ ಎಂದರು.