News Kannada
Wednesday, September 27 2023
ಮಂಗಳೂರು

ಮಂಗಳೂರು: ಮಂಗಳೂರಿನಿಂದ ಉಡುಪಿಗೆ ತೆರಳಿದ ರಾಜ್ಯಪಾಲರು

Governor leaves for Udupi from Mangaluru
Photo Credit : News Kannada

ಮಂಗಳೂರು: ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು.

ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸ್ವಾಗತಿಸಿದರು.

ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ನಂತರ ರಾಜ್ಯಪಾಲರು ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳಿದರು.

See also  ಚೆನ್ನೈ| ಪ್ರತ್ಯೇಕ ತಮಿಳುನಾಡು ಬೇಡಿಕೆಯನ್ನು ಪುನರುಜ್ಜೀವನಗೊಳಿಸಲು ಒತ್ತಾಯಿಸಬೇಡಿ: ಎ.ರಾಜಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು