News Kannada
Saturday, October 08 2022

ಮಂಗಳೂರು

ಮಂಗಳೂರು: ನೆಹರೂ ಕುಟುಂಬವನ್ನು ಅವಮಾನಿಸುವ ಕೆಲಸ ಆಗುತ್ತಿದೆ ಎಂದ ಮಾಜಿ ಸಚಿವ ರಮಾನಾಥ ರೈ - 1 min read

Photo Credit : News Kannada

ಮಂಗಳೂರು: ದೇಶದ ಅಭಿವೃದ್ಧಿಗೆ ಜವಾಹರ ಲಾಲ್‌ ನೆಹರು ಮತ್ತು ಅವರ ಕುಟುಂಬ ನೀಡಿದ ಕೊಡುಗೆ ಅಪಾರ. ದೇಶದ ಪ್ರಥಮ ಪ್ರಧಾನಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಅಪಾರ ಕೊಡುಗೆಯನ್ನು ನೀಡಿದ ಇಂತಹ ವ್ಯಕ್ತಿಯನ್ನು ಅವಮಾನಿಸುವ ಕೆಲಸವನ್ನು ಮಾಡುತ್ತಿರುವುದು ದುರಾದೃಷ್ಟಕರ ಮತ್ತು ಸಹಿಸಲಾಗದು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದವರನ್ನು ವೈಭವೀಕರಿಸುವ ಕಾಲ ಬಂದಿದೆ. ನೆಹರು ಕುಟುಂಬವನ್ನು ಅವಮಾನಿಸುವ ಮೂಲಕ ಅವರ ಸಾಧನೆ ಗೌಣ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್‌ ಶಶಿಧರ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಾಹುಲ್‌ ಹಮೀದ್‌, ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷ ವಿಶ್ವಾಸ್‌ ಕುಮಾರ್‌ ದಾಸ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೊ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಸಲೀಂ, ಪ್ರಕಾಶ್‌ ಸಾಲಿಯಾನ್‌, ಸುಧೀರ್‌ ಟಿ. ಕೆ., ಜೋಕಿಂ, ಬೇಬಿ ಕುಂದರ್‌, ಸುಭಾಶ್ಚಂದ್ರ, ಮಲ್ಲಿಕಾ ಪಕಳ, ಉಮೇಶ್‌ ದಂಡಕೇರಿ, ನಝೀರ್‌ ಬಜಾಲ್‌, ಶಬೀರ್‌ ಮತ್ತಿತರರು ಉಪಸ್ಥಿತರಿದ್ದರು.

See also  ಕಾರಿಂಜೇಶ್ವರ: ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮಕ್ಕೆ ಎಸ್.ಅಂಗಾರ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು