News Kannada
Friday, September 30 2022

ಮಂಗಳೂರು

ಬಂಟ್ವಾಳ: ಆ.27ರಿಂದ 29ರ ವರೆಗೆ ಸಿಪಿಐ ಪಕ್ಷದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ 24ನೇ ಸಮ್ಮೇಳನ - 1 min read

Photo Credit : By Author

ಬಂಟ್ವಾಳ: ಭಾರತೀಯ ಕಮ್ಯುನಿಸ್ಟ್ ಪಕ್ಷದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ 24ನೇ ಸಮ್ಮೇಳನ ಆ.27ರಿಂದ 29ರ ವರೆಗೆ ಬಂಟ್ವಾಳದಲ್ಲಿ ನಡೆಯಲಿದೆ ಎಂದು ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ಹೇಳಿದರು.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.14ರಿಂದ 18ರ ವರೆಗೆ ವಿಜಯವಾಡದಲ್ಲಿ ಪಕ್ಷದ ರಾಷ್ಟ್ರೀಯ ಸಮ್ಮೇಳನ ಹಾಗೂ ಸೆ.25ರಿಂದ 27ರ ವರೆಗೆ ಪಕ್ಷದ ರಾಜ್ಯ ಸಮ್ಮೇಳನ ನಡೆಯಲಿದೆ. ಇದರ ಪೂರ್ವಭಾವಿಯಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಸಮ್ಮೇಳನ ಬಂಟ್ವಾಳದಲ್ಲಿ ನಡೆಯಲಿದೆ ಎಂದರು.

ಜಿಲ್ಲಾ ಸಮ್ಮೇಳನದ ಪ್ರಯುಕ್ತ ಆ.27 ಮತ್ತು 28ರಂದು ಬಂಟ್ವಾಳ ಬೈಪಾಸ್ ನಲ್ಲಿರುವ ಕಾ. ಎ.ಶಾಂತಾರಾಮ ಪೈ ಸ್ಮಾರಕ ಭವನದಲ್ಲಿ ಪಕ್ಷದ ಪ್ರತಿನಿಧಿ ಸಮಾವೇಶ ನಡೆಯಲಿದೆ. 27ರಂದು ಬೆಳಗ್ಗೆ 10ಕ್ಕೆ ಧ್ವಜಾರೋಹಣ ನಡೆಯಲಿದೆ. 28ರಂದು ಸಂಜೆ 4ಕ್ಕೆ ಪಕ್ಷದ ಕಚೇರಿಯಿಂದ ಬಂಟ್ವಾಳದ ವಿವಿಧ ಮಾರ್ಗವಾಗಿ ಬೈಕ್ ಜಾಥ ನಡೆಯಲಿದೆ ಎಂದು ತಿಳಿಸಿದರು.

ಆ.29ರಂದು ಸಮ್ಮೇಳನದ ಬಹಿರಂಗ ಸಭೆ ಬಿ.ಸಿ.ರೋಡ್ ವೃತ್ತದ ಬಳಿಯ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 10ಕ್ಕೆ ಸರಿಯಾಗಿ ಬಿ.ಸಿ.ರೋಡ್ ಕೈಕಂಬದಿಂದ ಸಭಾ ಭವನದ ವರೆಗೆ ವರ್ಣರಂಜಿತ ಜಾಥ ನಡೆಯಲಿದೆ ಎಂದರು.

ಬಹಿರಂಗ ಸಭೆಯ ಅಧ್ಯಕ್ಷತೆಯನ್ನು ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ಕಾ. ವಿ.ಕುಕ್ಯಾನ್ ವಹಿಸಲಿದ್ದು, ಕೇರಳ ರಾಜ್ಯಸಭಾ ಸದಸ್ಯ ಕಾ. ಸಂತೋಷ್ ಕುಮಾರ್ ಉದ್ಘಾಟಿಸಲಿದ್ದಾರೆ. ಸಿಪಿಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಕಾ. ಸಾತಿ ಸುಂದರೇಶ್ ಮತ್ತು ರಾಷ್ಟ್ರೀಯ ಮಂಡಳಿ ಮಾಜಿ ಸದಸ್ಯ ಕಾ. ಡಾ. ಸಿದ್ದನಗೌಡ ಪಾಟೀಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಸಿಪಿಐ ದ.ಕ., ಉಡುಪಿ ಜಿಲ್ಲಾ ಸಹಕಾರ್ಯದರ್ಶಿ ಬಿ.ಶೇಖರ್, ವಿ.ಎಸ್.ಬೇರಿಂಜ, ಎಂ.ಕರುಣಾಕರ್, ಕಾರ್ಯಕಾರಿ ಸಮಿತಿ ಸದಸ್ಯ ಸುರೇಶ್ ಕುಮಾರ್ ಉಪಸ್ಥಿತರಿದ್ದರು.

See also  ಬೆಳ್ತಂಗಡಿ | ಧರ್ಮ ಮತ್ತು ನ್ಯಾಯ, ರೀತಿ ಮತ್ತು ನೀತಿ ವಿಭಿನ್ನವಲ್ಲ: ಸೇತುರಾಮ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು