ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸರ್ಕಾರೇತರ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆ. 09 ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ 37ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ-2022ರ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕಾರ್ಯಕ್ರಮ ಉದ್ಘಾಟಿಸುವರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ.ಕುಮಾರ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕ ಡಾ. ಸದಾಶಿವ ಶ್ಯಾನ್ ಭೋಗ್, ವೈಧ್ಯಕೀಯ ಅಧೀಕ್ಷಕ ದುರ್ಗಾ ಪ್ರಸಾದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾಪಭೋವಿ ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ನೇತ್ರ ತಜ್ಞೆ ಡಾ.ಸೌಮ್ಯ, ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಪದ್ಮಾವತಿ ಭಾಗವಹಿಸುವರು.