ಬಂಟ್ವಾಳ: ಮೈಸೂರಿನಲ್ಲಿಇತ್ತೀಚೆಗೆ ರಾಜ್ಯಮಟ್ಟದ 17ರ ವಯೋಮಾನದಕೆಟೆಲ್ ಬೆಲ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಎಸ್.ವಿ.ಎಸ್‌ಇಂಗ್ಲಿಷ್ ಸ್ಕೂಲ್ ವಿದ್ಯಾಗಿರಿ, ಬಂಟ್ವಾಳದ 9ನೇ ತರಗತಿ ವಿದ್ಯಾರ್ಥಿಗಳಾದ ಕುಮಾರ್ ಸ್ರೇಯಸ್, ಐಯಾನ್ ಅಬ್ದುಲ್ ಲತೀಫ್ ಮತ್ತು ಮಯೂರ್‌ಎನ್. ಪಿ ಇವರು ಭಾಗವಹಿಸಿ ವಿಜೇತರಾಗಿದ್ದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರನ್ನುಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಉಪಾಧ್ಯಕ್ಷೆ ವತ್ಸಲಾ ಕಾಮತ್, ಕಾರ‍್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ, ಅನಿರುದ್ಧ ಕಾಮತ್, ಎಸ್.ವಿ.ಎಸ್ ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಮುಖ್ಯೋಪಾಧ್ಯಾಯರು, ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.