News Kannada
Thursday, October 06 2022

ಮಂಗಳೂರು

ಬೆಳ್ತಂಗಡಿ: ದೇಗುಲಗಳ ಅಭಿವೃದ್ಧಿ ಕಾರ್ಯದಲ್ಲಿ ಗ್ರಾಮಸ್ಥರ ಸೇವೆ ಪ್ರಮುಖ ಪಾತ್ರವಹಿಸುತ್ತದೆ - 1 min read

Belthangady: The service of the villagers plays an important role in the development of temples
Photo Credit : By Author

ಬೆಳ್ತಂಗಡಿ: ತ್ಯಾಗ, ಸಮರ್ಪಣಾ ಮನೋಭಾವಗಳಿಂದ ಮಾಡುವ ಕೆಲಸಗಳು ಆತ್ಮ ತೃಪ್ತಿಯನ್ನು ನೀಡುತ್ತವೆ. ದೇಗುಲಗಳ ಅಭಿವೃದ್ಧಿ ಕಾರ್ಯದಲ್ಲಿ ಗ್ರಾಮಸ್ಥರು ನೀಡುವ ಸೇವೆಯು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಶನಿವಾರ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಜರಗಿದ ತಂತ್ರಿಗಳ ವಸತಿ ನಿಲಯದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಪಜಿರಡ್ಕ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಗ್ರಾಮಸ್ಥರಿಗೆ ಸಂಪರ್ಕವನ್ನು ಹತ್ತಿರಗೊಳಿಸಿದೆ. ಈ ಭಾಗಕ್ಕೆ ಅಗತ್ಯ ಇರುವ ರಸ್ತೆಗೆ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು. ಇಲ್ಲಿನ ಸಭಾಭವನ ರಚನೆಯ ಅನುದಾನದ ಬಗ್ಗೆ ಸಚಿವರಲ್ಲಿ ಮಾತುಕತೆ ನಡೆಸುವುದಾಗಿ ತಿಳಿಸಿದರು.ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಮಾತನಾಡಿದರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ತುಕಾರಾಮ ಸಾಲಿಯನ್, ಕಾರ್ಯದರ್ಶಿ ಮಂಜುನಾಥ ಶೆಟ್ಟಿ, ಖಜಾಂಜಿ ಪಾಂಡುರಂಗ ಕಾಕತ್ಕರ್ ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ ನಿಡಿಗಲ್, ಉಪಾಧ್ಯಕ್ಷ ವಿಮಲಾ, ಸಂತೋಷ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ವಂದಿಸಿದರು.

See also  ಕುಡಿತದ ಅಮಲಿನಲ್ಲಿ ವ್ಯಕ್ತಿಯೋರ್ವ ತಾಯಿ ಹಾಗೂ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು