ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಹಬ್ಬಕ್ಕೆ ಪೂರಕವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ದಸರಾ ರಜೆ ನೀಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದರು.
ಈ ಮನವಿಗೆ ಸ್ಪಂದಿಸಿದ ಶಿಕ್ಷಣ ಸಚಿವ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ. ಅ.2ರಂದು ಗಾಂಧಿ ಜಯಂತಿ ಆಚರಿಸುವ ಷರತ್ತಿನೊಂದಿಗೆ ರಜೆ ಘೋಷಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.