ಬೆಳ್ತಂಗಡಿ: ಎನ್.ಸಿ.ಇ.ಆರ್.ಟಿಯವರು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕು. ದೀಕ್ಷಾ ಬಿ. ಎಸ್. ರಾಷ್ಟ್ರಮಟ್ಟದಲ್ಲಿ ಮೊದಲ ಸ್ಥಾನವನ್ನು ಗಳಿಸಿದ್ದಾರೆ.
ಇಲ್ಲಿ ಆಯ್ಕೆಯಾದವರು ಆರ್ ಐಇ ಗಳಲ್ಲಿ ಮೂಲವಿಜ್ಞಾನಗಳನ್ನು ಓದಲು ಅರ್ಹತೆಯನ್ನು ಪಡೆಯುತ್ತಾರೆ. ದೀಕ್ಷಾ ಬಿ ಎಸ್ ಇವರು ಆರ್ ಐಇ ಮೈಸೂರಿನಲ್ಲಿ ಉನ್ನತವ್ಯಾಸಂಗಕ್ಕೆ ಆಯ್ಕೆಯಾಗಿದ್ದಾರೆ. ಎಂಎಸ್ಸಿ ಇಡಿ ಇಡಿ ಮತ್ತು ಬಿಎಸ್ಸಿ ಇಡಿ ಪದವಿಗೆ ಅರ್ಹತೆ ಪಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಇವರು ಎಂಎಸ್ಇ ಇಡಿ ಗಣಿತ ಮತ್ತು ಎಂಎಸ್ಸಿ ಇಡಿ ರಸಾಯನಶಾಸ್ತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಮೊದಲ ಸ್ಥಾನವನ್ನು, ಬಿಎಸ್ಸಿ ಇಡಿನಲ್ಲಿ ರಾಜ್ಯಕ್ಕೆ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಮೊದಲು ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ 593 (98.83) ಅಂಕವನ್ನು ಸಂಪಾದಿಸಿ ರಾಜ್ಯಕ್ಕೆ ಆರನೇ ಸ್ಥಾನವನ್ನು ಸಂಪಾದಿಸಿದ್ದರು.ಸಿಇಟಿಯಲ್ಲೂ ಉತ್ತಮ ಸ್ಥಾನ ಪಡೆದಿರುವ ಇವರು ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಮತ್ತು ಉಜಿರೆ ಎಸ್ ಡಿ ಎಮ್ ಆಂಗ್ಲಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿನಿ.
ಸಂಗೀತದಲ್ಲಿ ಜ್ಯೂನಿಯರ್ ಮತ್ತು ಭರತನಾಟ್ಯದಲ್ಲಿ ಸೀನಿಯರ್ ಪರೀಕ್ಷೆ ಮುಗಿಸಿರುವ ಇವರು ಉಜಿರೆಯ ಎಸ್ ಡಿ ಎಂ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ಡಾ ಶ್ರೀಧರ ಭಟ್ ಮತ್ತು ಉಜಿರೆ ಹಳೆಪೇಟೆಯ ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ವೀಣಾ ಶ್ಯಾನಭಾಗ ಇವರ ಪುತ್ರಿ.