ಬಂಟ್ವಾಳ: ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ಕೆಎಸ್ ಆರ್ ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಪ್ರಯಾಣಿಕ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಸಾವನ್ನಪ್ಪಿದವರು. ಅವರು ಸೆ.15ರಂದು ವಿಟ್ಲ ಪೇಟೆಯಿಂದ ಕೆಲಸ ಮುಗಿಸಿ ವಿಟ್ಲ ಪಕಳಕುಂಜ ಕೆ ಎಸ್ ಆರ್ ಟಿ ಸಿ ಬಸ್ಸಲ್ಲಿ ಪ್ರಯಾಣಿಕನಾಗಿ ವಿಟ್ಲದಿಂದ ಹೊರಟು ಕೆದುವಾರು ಎಂಬಲ್ಲಿಗೆ ಸುಮಾರು 12.25 ಗಂಟೆ ಸಮಯಕ್ಕೆ ತಲುಪುವ ವೇಳೆ ಬಸ್ ಸ್ಟಾಪ್ ನಲ್ಲಿ ಇಳಿಯಲು ಎದ್ದು ನಿಂತಾಗ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನು ತಿರುವು ರಸ್ತೆಯಲ್ಲಿ ಒಮ್ಮೆಲೇ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಬಸ್ಸನ್ನು ಚಲಾಯಿಸಿದ್ದರಿಂದ ಬಸ್ಸಿನ ಹಿಂಬದಿಯ ಬಾಗಿಲಿನಿಂದ ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ತಲೆಗೆ ಮತ್ತು ದೇಹದ ಇತರ ಭಾಗಗಳಿಗೆ ಗಾಯವಾಗಿತ್ತು.
ಇನಾಸ್ ಡಿಸೋಜಾ ಅವರು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.