News Kannada
Sunday, December 04 2022

ಮಂಗಳೂರು

ಮಂಗಳೂರು: ಗಾಂಧಿನಗರ ಶಾಲೆಗೆ ಮೂರು ಕೊಠಡಿ ಮಂಜೂರು-ವೇದವ್ಯಾಸ ಕಾಮತ್

Mangaluru: Three rooms allotted to Gandhinagar school: Vedavyas Kamath
Photo Credit : By Author

ಮಂಗಳೂರು, ಸೆ.25: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಗಾಂಧಿ ನಗರ ಹಿರಿಯ ಪ್ರಾಥಮಿಕ ಮೂರು ಕೊಠಡಿ ಗಳನ್ನು ಮಂಜೂರಾತಿಯಾಗಿದೆ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ದಾನಿಗಳು ಸಹಕಾರ ದಿಂದ ನೀಡಿದ ಮೂರು ಸ್ಟೀಲ್ ಕಪಾಟುಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಗಾಂಧಿ ನಗರ ಹಿರಿಯ ಪ್ರಾಥಮಿಕ ಶಾಲೆಗೆ ಶನಿವಾರ ಹಸ್ತಾಂತರ ಮಾಡಿ ಮಾತನಾಡುತ್ತಿದ್ದರು.

ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶಾಲೆಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಮೂಲಭೂತ ಸೌಕರ್ಯ ಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾ ಗುತ್ತಿದೆ.ನಗರದ ಸರ್ವಾಂಗೀಣ ಅಭಿವೃದ್ಧಿ ಯನ್ನು ಸಂಘ ಸಂಸ್ಥೆ ಗಳ ಸಹಭಾಗಿತ್ವದಲ್ಲಿ ಮಾಡುವ ಗುರಿಹೊಂದಿರುವುದಾಗಿ ಅವರು ತಿಳಿಸಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ,ಜಿಲ್ಲಾ ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಹಾಗೂ ಪದಾಧಿಕಾರಿಗಳು ಶಾಲಾ ಮುಖ್ಯೋಪಾಧ್ಯಾಯಿನಿ ಯಶೋಧ ದ.ಕ.ಜಿ.ಪಂ. ಉನ್ನತೀಕರಿಸಿದ ಹಿ.ಪ್ರಾ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್,ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮನೋಜ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

See also  ಬಾಲಕಿಯ ಅತ್ಯಾಚಾರ ವೆಸಗಿ ಕೊಂದವರಿಗೆ ಕಠಿನ ಶಿಕ್ಷೆ ನೀಡಿ : ಪೋಲಿಸ್ ಆಯುಕ್ತರಿಗೆ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು