News Kannada
Sunday, October 01 2023
ಮಂಗಳೂರು

ಮಂಗಳೂರು: ಕಮ್ಯೂನಿಸ್ಟ್ ಹೆಜ್ಜೆಗಳು ಈಗಲೂ ದೇಶದಲ್ಲಿ ಹಸಿರಾಗಿವೆ – ಕೆ.ಮಹಾಂತೇಶ್

Mangaluru: Communist's footsteps are still green in the country: K Mahantesh
Photo Credit : By Author

ಮಂಗಳೂರು: ವಿಮೋಚನಾ ಚಳವಳಿಯಿಂದ ಆರಂಭವಾದ‌‌ ಕಮ್ಯೂನಿಸ್ಟ್ರರ ಕ್ರಾಂತಿಕಾರಿ ಹೆಜ್ಜೆಗಳು ಈಗಲೂ ದೇಶದ ಮೂಲೆ‌ಮೂಲೆಯಲ್ಲಿ ಜೀವಂತವಾಗಿವೆ. ಶೋಷಿತ ಜನಚಳವಳಿ‌ ಜತೆ ಕಮ್ಯೂನಿಸ್ಟರು ಅವಿನಾಭಾವ ಸಂಬಂಧ ಹೊಂದಿರುವುದೇ ಇದಕ್ಕೆ ಪ್ರಮುಖ ಕಾರಣವೆಂದು ಸಿಐಟಿಯು ‌ಸಂದೇಶ ಮಾಸ ಪತ್ರಿಕೆಯ ಸಂಪಾದಕರಾದ ಕೆ.ಮಹಾಂತೇಶ್ ರವರು ಅಭಿಪ್ರಾಯಪಟ್ಟರು.

ಅವರು ನಗರದ ಸಹೋದಯ‌ ಸಭಾಂಗಣದಲ್ಲಿ ಡಾ‌. ಕೃಷ್ಣಪ್ಪ ಕೊಂಚಾಡಿ ಅನುವಾದಿತ ಮುಜಪರ್ ಅಹಮ್ಮದ್ ಅವರ ಕಮ್ಯೂನಿಸ್ಟ್ ಚಳವಳಿಯ ಆರಂಭಿಕ ಹೆಜ್ಜೆಗಳು ಎಂಬ ಕೃತಿಯನ್ನು ಬಿಡುಗಡೆಗೊಳಿಸುತ್ತಾ, ಮಾತನಾಡಿದರು.

ಮುಂದುವರಿಸುತ್ತಾ ಅವರು, ಭಾರತೀಯ ಸ್ವಾತಂತ್ರ್ಯ ಚಳವಳಿಯು ಕಮ್ಯೂನಿಸ್ಟ್‌ ಪಕ್ಷದ ಸ್ಥಾಪನೆ ಬಳಿಕವಷ್ಟೇ ಒಂದು ಕ್ರಾಂತಿಕಾರಿ ಪಥದತ್ತ ಸಾಗಲು ಸಾಧ್ಯವಾಗಿದ್ದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಪೂರ್ಣ ಸ್ವರಾಜ್ಯ ಬೇಡಿಕೆಯನ್ನು ಮೊದಲು ಮಂಡಿಸಿದ್ದು‌ ಕಮ್ಯೂನಿಸ್ಟರೇ ಎಂದು ಅವರು ನೆನಪಿಸಿದರು.

ಪುಸ್ತಕ ಪರಿಚಯಿಸಿದ ನಿವೃತ್ತ ಪ್ರಾಧ್ಯಾಪಕ ಡಾ ರಾಜೇಂದ್ರ ಉಡುಪ ಅವರು ಮಾತನಾಡಿ, ಕಮ್ಯುನಿಸ್ಟ್ ಪಕ್ಷದ ಹುಟ್ಟೇ ಒಂದು ಸಾಹಸಮಯ ಹೋರಾಟ.1920ರ ಕಾಲಘಟ್ಟದಲ್ಲಿ ಜನ್ಮ ತಾಳಿದ ಭಾರತದ ಕಮ್ಯುನಿಸ್ಟ್ ಪಕ್ಷವನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಬ್ರಿಟಿಷರು ಹೆಣೆದ ತಂತ್ರಗಳು ಅಗಾಧವಾದದ್ದು. ಅವುಗಳನ್ನೆಲ್ಲ ಮೆಟ್ಟಿ ನಿಂತು,ಅನುಭವಿಸಿದ ಯಾತನಾಮಯ ಬದುಕಿನ ಎಳೆಎಳೆಯನ್ನು ಮುಝಾಪರ್ ಅಹಮ್ಮದ್ ರವರು ಬಿಚ್ಚಿಟ್ಟ ರೀತಿ ರೋಮಾಂಚನಕಾರಿಯಾಗಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಗತಿಪರ ಜನಸಮುದಾಯ ಪ್ರಕಾಶನದ ಪ್ರಕಾಶಕರಾದ ಸುನಿಲ್ ಕುಮಾರ್ ಬಜಾಲ್ ರವರು, ಪತ್ರಿಕಾ ಮಾಧ್ಯಮದಲ್ಲಿ ತನ್ನ ಜವಾಬ್ದಾರಿಯುತ ಪಾತ್ರವನ್ನು ನಿರ್ವಹಿಸಲು ಜನ್ಮ ತಾಳಿದ ಪ್ರಗತಿಪರ ಜನಸಮುದಾಯ ಮಾಸಿಕ ಪತ್ರಿಕೆಯು ಅತ್ಯಲ್ಪ ಕಾಲದಲ್ಲಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವಂತಹ ಕಾರ್ಯ ನಿರ್ವಹಿಸಿದೆ. ಬಳಿಕ ಪ್ರಕಾಶನದ ಹೆಸರಿನಲ್ಲಿ ಹಲವಾರು ಪುಸ್ತಕಗಳನ್ನು ಮುದ್ರಿಸಿ ಜನತೆಯ ತಿಳುವಳಿಕೆಯ ಮಟ್ಟವನ್ನು ಸುಧಾರಿಸಲು ಪ್ರಯತ್ನಪಟ್ಟಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ದ ನಿವ್ರತ್ತ ಪ್ರಾಂಶುಪಾಲರಾದ ಎನ್ ಇಸ್ಮಾಯಿಲ್ ರವರು ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ವಿಚಾರವಾದಿ ಸಂಘಟನೆಯ ನಾಯಕರಾದ ಡಾ.ನರೇಂದ್ರ ನಾಯಕ್, ಸಮುದಾಯ ಸಂಘಟನೆಯ ವಾಸುದೇವ ಉಚ್ಚಿಲ್, ಮುಖಪುಟ ವಿನ್ಯಾಸಗಾರರಾದ ನಾಗೇಶ್ ಕಲ್ಲೂರು, ಪುಸ್ತಕ ಅನುವಾದಕರಾದ ಡಾ.ಕ್ರಷ್ಣಪ್ಪ ಕೊಂಚಾಡಿಯವರು ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಯೋಗೀಶ್ ಜಪ್ಪಿನಮೊಗರುರವರು ಸ್ವಾಗತಿಸಿದರೆ, ಕೊನೆಯಲ್ಲಿ ಬಿ.ಕೆ. ಇಮ್ತಿಯಾಜ್ ರವರು ವಂದಿಸಿದರು. ಮನೋಜ್ ವಾಮಂಜೂರುರವರು ಕಾರ್ಯಕ್ರಮ ನಿರ್ವಹಿಸಿದರು.

See also  ಕಲ್ಲೇರಿ: ಮೃತಪಟ್ಟ ಸಂಬಂಧಿಯನ್ನು ನೋಡಲು ತೆರಳುತಿದ್ದಾಗ ಅಪಘಾತ, ಸವಾರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು