News Kannada
Wednesday, December 07 2022

ಮಂಗಳೂರು

ಬಂಟ್ವಾಳ: ಪಿಎಫ್ಐ ಕಾರ್ಯಕರ್ತರ ಮನೆ ಮೇಲೆ ದಾಳಿ

Bantwal: PFI activist's house raided
Photo Credit : By Author

ಬಂಟ್ವಾಳ: ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಮೂವರನ್ನು ಬಂಧಿಸಿ ತಹಶೀಲ್ದಾರ್ ಬಳಿ ಹಾಜರು ಪಡಿಸಿದ್ದಾರೆ.

ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್, ಫಿರೋಜ್ ಖಾನ್, ರಾಝಿಕ್ ಬಂಧಿತರು. ಬಂಧಿತರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಕೆಲ ದಿನಗಳಿಂದ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಿಎಫ್ ಐ ಕಾರ್ಯಕರ್ತರ ಬಂಧನ ಹಾಗು ವಿಚಾರಣೆ ನಡೆಯುತ್ತಿದ್ದು, ಇದರ ಒಂದು ಭಾಗವಾಗಿ ಈ ಕಾರ್ಯಾಚರಣೆ ವರಿಷ್ಠ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಕೈಗೊಂಡಿದ್ದಾರೆ.

ಬಂಟ್ವಾಳ ಸುತ್ತಮುತ್ತಲಿರುವ ಪಿಎಫ್ಐ ಕಾರ್ಯಕರ್ತರ ಮನೆಗಳಿಗೆ ತೆರಳಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಅವರನ್ನು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು ಅವರ ಮುಂದೆ ಹಾಜರುಪಡಿಸಿದ್ದಾರೆ.

See also  ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಹೊಂದಿದ್ದ ನಾಲ್ವರು ಆರೋಪಿಗಳ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು