News Kannada
Wednesday, November 30 2022

ಮಂಗಳೂರು

ಧರ್ಮಸ್ಥಳ: ಅ.24ರಂದು ಡಿ. ವೀರೇಂದ್ರ ಹೆಗ್ಗಡೆಯವರ 55ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ - 1 min read

Belthangady: Dr. Veerendra Heggade celebrates his 75th birthday today
Photo Credit : Wikimedia

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 55ನೇ ವರ್ಧಂತ್ಯುತ್ಸವವು ನಾಳೆ ಸೋಮವಾರ ಧರ್ಮಸ್ಥಳದಲ್ಲಿ ಸಂಭ್ರಮ-ಸಡಗರದಿಂದ ನಡೆಯುತ್ತದೆ.

ದೇವಸ್ಥಾನ ಮತ್ತು ಬಸದಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ. ದೇವಳದ ನೌಕರರು, ಊರಿನ ನಾಗರಿಕರು, ಭಕ್ತರು, ವಿವಿಧ ಸಂಸ್ಥೆಗಳ ನೌಕರರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು.
ಬೀಡು (ಹೆಗ್ಗಡೆಯವರ ನಿವಾಸ), ದೇವಸ್ಥಾನ, ವಸತಿ ಛತ್ರಗಳನ್ನು ಆಕರ್ಷಕ ವಿನ್ಯಾಸಗಳಿಂದ ಅಲಂಕರಿಸಲಾಗಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣವಿದೆ.

ಸಂಜೆ ನಾಲ್ಕು ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ಹೆಗ್ಗಡೆಯವರ ಅಭಿನಂದನಾ ಸಮಾರಂಭ ನಡೆಯುತ್ತದೆ.
ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸುವರು.

ಶಾಸಕರುಗಳಾದ ಕೆ. ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡುವರು.
ಈ ವೇಳೆ ಹಿರಿಯ ನೌಕರರ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳ ಅಭಿನಂದನೆ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಾಧನೆಗಳ ಸರದಾರ: 1948ರ ನವಂಬರ್ 25 ರಂದು ಅಂದಿನ ಧರ್ಮಾಧಿಕಾರಿಗಳಾಗಿದ್ದ ಕೀರ್ತಿ ಶೇಷ ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿಯ ಹಿರಿಯ ಮಗನಾಗಿ ಜನಿಸಿದ ವೀರೇಂದ್ರ ಕುಮಾರ್ 1968ರ ಅಕ್ಟೋಬರ್ 24 ರಂದು ಧರ್ಮಸ್ಥಳದ 21ನೆ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು.

ಎಂಟು ಶತಮಾನಗಳಿಂದ ನಡೆಯುತ್ತಿದ್ದ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನದೊಂದಿಗೆ ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ವರ್ಷ ಉಚಿತ ಸಾಮೂಹಿಕ ವಿವಾಹ, ಕಲ್ಯಾಣ ಮಂಟಪಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಆಯುರ್ವೇದ, ಪ್ರಕೃತಿ ಚಿಕಿತ್ಸಾ ವಿಧಾನ ಮತ್ತು ಯೋಗ ವಿಜ್ಞಾನಕ್ಕೆ ಕಾಯಕಲ್ಪ, ಸ್ವ-ಉದ್ಯೋಗ ತರಬೇತಿ ಕೇಂದ್ರಗಳು ಮೊದಲಾದ ಹತ್ತು ಹಲವು ಯೋಜನೆಗಳನ್ನು ದೇಶದೆಲ್ಲೆಡೆ ಆರಂಭಿಸಿದರು.

ಇವರ ಸೇವೆ-ಸಾಧನೆಯನ್ನು ಮನ್ನಿಸಿ ಪ್ರಧಾನಿ ನರೇಂದ್ರ ಮೋದಿಯವರೆ ಹೆಗ್ಗಡೆಯವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿರುವುದು ಧರ್ಮಸ್ಥಳಕ್ಕೆ ಸಂದ ಗೌರವವಾಗಿದೆ. ಸಂಪ್ರದಾಯದಂತೆ ಪಟ್ಟಾಭಿಷೇಕ ವರ್ಧಂತಿ ದಿನ ಹೆಗ್ಗಡೆಯವರು ತಮ್ಮ ಹೊಸ ಯೋಜನೆಗಳನ್ನು ಪ್ರಕಟಿಸುವರು.

ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಧರ್ಮಸ್ಥಳ ಬೇಟಿ ಇಂದು
ಬೆಳ್ತಂಗಡಿ:ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಭಾನುವಾರ ಮಂಗಳೂರಿಗೆ ಬಂದು ವಾಸ್ತವ್ಯ ಇದ್ದು, ನಾಳೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಧರ್ಮಸ್ಥಳ ತಲುಪುವರು.
ಸಂಜೆ 4 ಗಂಟೆಗೆ ಡಿ. ವೀರೇಂದ್ರ ಹೆಗ್ಗಡೆಯವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾತ್ರಿ ಕಾಗೇರಿಗೆ ಪ್ರಯಾಣಿಸುವರು ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

See also  ಜಗತ್ತಿಗೆ ಒಳಿತು ಬಯಸುವ ಹಿಂದೂ ಸಮಾಜ ಒಟ್ಟಾದರೆ ರಾಮರಾಜ್ಯ ನಿರ್ಮಾಣ ಸಾಧ್ಯ: ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು