ಮಂಗಳೂರು: ನಗರದ ಕೆನರಾ ವಿಕಾಸ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಸದಸ್ಯರಾದ ರಾಘವೇಂದ್ರ ಕುಡ್ವ, ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಡಾ.ರಾಧಾಕೃಷ್ಣ ಐತಾಳ್, ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ಪಿಆರ್ ಒ ಉಜ್ವಲ ಮಲ್ಯಾ, ಕೆನರಾ ವಿಕಾಸ್ ಶಿಕ್ಷಣ ಸಂಸ್ಥೆಯ ಸಂಯೋಜಕರಾದ ಪಾರ್ಥಸಾರಥಿ ಪಾಲೆಮಾರ್, ಕೆನರಾ ವಿಕಾಸ್ ಪಿಯುಸಿ ಕಾಲೇಜಿನ ಪ್ರಾಂಶುಪಾಲೆ ಮೋಹನಾ ಆರ್, ಕೆನರಾ ವಿಕಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯ ಕೆ, ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕರಾದ ಶೋಭಾ ಪಿ ಸ್ವಾಗತಿಸಿ ನಿರೂಪಿಸಿದರು. ವಿದ್ಯಾರ್ಥಿಗಳು ಸಮೂಹ ಗೀತೆಗಳನ್ನು ಹಾಡಿದರು.