News Kannada
Friday, December 02 2022

ಮಂಗಳೂರು

ಮಂಗಳೂರು: ನ.5ರಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ೧೨ ನೇ ಘಟಿಕೋತ್ಸವ ಕಾರ್ಯಕ್ರಮ

Mangaluru: The 12th convocation of Nitte Deemed University will be held on November 5.
Photo Credit : News Kannada

ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ೧೨ ನೇ ಘಟಿಕೋತ್ಸವ ಕಾರ್ಯಕ್ರಮ ನವೆಂಬರ್ ೫ ರಂದು ಮಂಗಳೂರಿನ ಕೆಎಸ್ ಹೆಗ್ಡೆ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ. ಡಾ . ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.

ಮಂಗಳೂರಿನ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ‌ ನೀಡಿದ ಅವರು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಕುಲಪತಿಗಳಾದ ಡಾ. ಎನ್ ವಿನಯ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು ವಿಶ್ವ ವಿದ್ಯಾನಿಲಯದ ಅನುದಾನ ಆಯೋಗದ ಅಧ್ಯಕ್ಷರಾದ ಪ್ರೊ. ಮಮದಿಲ ಜಗದೀಶ್ ಕುಮಾರ್ ಮುಖ್ಯ ಅಥಿತಿಯಾಗಿ ಭಾಗವಹಿಸಲಿದ್ದಾರೆ ಮಾತ್ರವಲ್ಲದೆ ಘಟಿಕೋತ್ಸವದಲ್ಲಿ ಒಟ್ಟು ೯೯೪ ಅಭ್ಯರ್ಥಿಗಳು ಸ್ನಾತಕ,ಸ್ನಾತಕೋತ್ತರ, ಡಾಕ್ಟರೇಟ್ ಪದವಿ ಸೇರಿ ಫಲೋಶಿಪ್ ಪಡೆಯಲಿದ್ದಾರೆ.

ಈ ಪೈಕಿ ಒಟ್ಟು ೨೧ ಡಾಕ್ಟೊರಲ್, ೩೨೧ ಸ್ನಾತಕೋತ್ತರ, ೬೪೭ ಸ್ನಾತಕ ಪದವಿ ಹಾಗೂ ೨ ಫೆಲೋಶಿಪ್ ಪಡೆಯಲಿದ್ದಾರೆ. ಎಂದವರು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಪ್ರೊ ವೈಸ್ ಚಾನ್ಸಲರ್ ಪ್ರೊ. ಡಾ ಎಂ ಎಸ್ ಮೂಡಿತಾಯ, ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪ್ರೊ.ಡಾ ಹರ್ಷ ಹಲಹಲ್ಲಿ ಮತ್ತಿತರರು ಉಪಸ್ಥಿತರಿದ್ದರು.

See also  ಬೆಳ್ತಂಗಡಿ: ಪಟ್ಟಣ ಪಂಚಾಯತ್‌ ಸಭಾಂಗಣದಲ್ಲಿ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು