News Kannada
Thursday, December 01 2022

ಮಂಗಳೂರು

ಧರ್ಮಸ್ಥಳ: ಕಲಾತ್ಮಕರಿಗೆ ಸವಾಲೆಸೆದ `ಸಿರಿಯ’ ನವರಸಯಾನ - 1 min read

Siriya' Navrasayana challenges artists
Photo Credit : By Author

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ನಡೆಯುತ್ತಿರುವ, ಲಕ್ಷ ದೀಪೋತ್ಸವದ ಪ್ರಯುಕ್ತಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿರಿ ವಾನಳ್ಳಿಯವರ ಏಕ ವ್ಯಕ್ತಿ ನಾಟಕ ಪ್ರೇಕ್ಷಕರನ್ನ ರಂಜಿಸಿತು.

ಸುಮಾರು ಒಂದುವರೆ ಘಂಟೆಗಳ ಅವಧಿಯಲ್ಲಿ ವೇದಿಕೆಯ ಮೇಲೆ ಏಕಾಂಗಿಯಾಗಿ, ಸ್ಪಷ್ಠವಾಗಿ, ನಿರರ್ಗಳವಾಗಿ, ಗಟ್ಟಿಧ್ವನಿಯಲ್ಲಿ ಸಂಭಾಷಣೆಯ ಮೂಲಕ ಪ್ರೇಕ್ಷಕರಿಗೆ ನವರಸ ಉಣಬಡಿಸುತ್ತಿದ್ದ ಸಿರಿ ವಾನಳ್ಳಿಯವರ ನಟನೆ ಪ್ರೇಕ್ಷಕರನ್ನು ರೋಮಾಂಚನಗೊಳಿಸಿತು.

ಬಾಲ್ಯದಿಂದಲೇ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಸಿರಿ ಚಲನಚಿತ್ರಗಳಲ್ಲಿಯೂ ತೊಡಗಿಸಿಕೊಂಡು ನಟನೆಗಾಗಿ ರಾಜ್ಯಪ್ರಶಸ್ತಿಯನ್ನು ಪಡೆದುಕೊಂಡವಳು. ಚಿತ್ರಕಲೆ, ಸಂಗೀತ, ಯಕ್ಷಗಾನದಲ್ಲೂಕೂಡಾ ತೊಡಗಿಸಿಕೊಂಡಿರುವ ಈಕೆ `ಆನಂದ ಭಾಮಿನಿ’ ಏಕವ್ಯಕ್ತಿ ನಾಟಕದಲ್ಲಿ `ಸಾವಿತ್ರಿ ಆಗಿ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾಳೆ.

19ನೇ ಶತಮಾನದ `ಸಾವಿತ್ರಿ’ ಪ್ರೇಮಎಂಬುದು ಬಂಧನವಾಗದೆ ಬಿಡುಗಡೆಯ ಆಯಾಮವಾಗಲು ಪ್ರೇಮಿಗಳಿಗೆ ಇರಬೇಕಾದ ಎಲ್ಲಾಆದರ್ಶವನ್ನು ತನ್ನ ದೃಷ್ಟಿಕೋನದಲ್ಲಿ ಪ್ರಿಯಕರನ ಬಳಿ ಪ್ರಶ್ನಿಸುತ್ತಾ ಹೋಗುತ್ತಾಳೆ. ಆತನ ಪತ್ರವನ್ನು ಓದಿ ಅವನಿಗೆ ಪತ್ರವನ್ನು ಬರೆಯುತ್ತಾ ಆಕೆ ಮೆಲಕುಹಾಕುವ ಸನ್ನಿವೇಶವೇ ಸುಂದರ ನಾಟಕವಾಗಿ ಹೊರಹೊಮ್ಮಿದೆ.

ಅನುಭವಗಳು, ಬೆಳವಣಿಗೆ, ಬದಲಾವಣೆ, ಹೆಣ್ತನದಘನತೆಯ ಸೂಕ್ಷ್ಮತೆಗಳು, ನೈಜ ಪ್ರೇಮದ ಸ್ವರೂಪಗಳು, ಯುದ್ಧದ ತಲ್ಲಣಗಳು, ಶಾಂತಿಯ ಮಹತ್ವ ಮತ್ತು ಆಕೆ ಕೇಳುವ ಪ್ರಶ್ನೆಗಳಿಗೆ ಆಕೆಯೇ ಉತ್ತರವಾಗಿ ಸ್ತ್ರೀತನದ ವಿವಿಧ ಆಯಾಮಗಳನ್ನು ಎಳೆಎಳೆಯಾಗಿ ಬಿಚ್ಚಿಡುವ ಈ ಕೃತಿಯನ್ನು ಮರಾಠಿಯಿಂದ ಕನ್ನಡಕ್ಕೆಗಿರಿಜಾ ಶಾಸ್ತ್ರಿಯವರು ಅನುವಾದಿಸಿದ್ದಾರೆ. ರಂಗ ಸ್ವರೂಪವನ್ನು ಸುಧಾ ಆಡುಕಳ ನೀಡಿದ್ದಾರೆ. ಸಿರಿ ವಾನಳ್ಳಿ ಅವರ ಅಭಿನಯ ವೇದಿಕೆಗೆ ಗಣೇಶ್ ಬೆಳಕು ಮತ್ತುರಂಗ ನಿರ್ವಹಣೆಯನ್ನು ಮಾಡಿದರೆ, ಸಿದ್ಧಾಂತ ಮೈಸೂರು ಸಂಗೀತವನ್ನು ನೀಡಿದರು. ಈ ಸಂದರ್ಭಕ್ಕೆ ಸಾಕಷ್ಟು ಕಲಾಭಿಮಾನಿಗಳು ಸೇರಿದಂತೆ ನೂರಾರುಜನರು ಸಾಕ್ಷಿಯಾದರು.

ವರದಿ: ಪ್ರಸೀದ್ ಭಟ್.
ಎಸ್ ಡಿ ಎಮ್ ಸ್ನಾತಕೋತ್ತರಕೇಂದ್ರ. ಉಜಿರೆ.

ಚಿತ್ರ ಕೃಪೆ: ವಿವೇಕ್ ಸಿ. ಪಿ.
ಎಸ್ ಡಿ ಎಮ್ ಸ್ನಾತಕೋತ್ತರಕೇಂದ್ರ. ಉಜಿರೆ.

See also  ಪವಿತ್ರ ಪುಣ್ಯಕ್ಷೇತ್ರ ಶ್ರೀ ಕಾರಿಂಜೇಶ್ವರದಲ್ಲಿ ಚಪ್ಪಲಿ ಧರಿಸಿ ವಿಕೃತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು