News Kannada
Saturday, November 26 2022

ಮಂಗಳೂರು

ಧರ್ಮಸ್ಥಳ: ಶ್ರೀಕ್ಷೇತ್ರ ಸನ್ನಿಧಿಯಲ್ಲಿ ‘ನಾಗಸ್ವರವಾದನ’ದ ಸೇವೆ - 1 min read

Dharmasthala: 'Nagaswaravadana' service at Srikshetra Sannidhi
Photo Credit : News Kannada

ಉಜಿರೆ, ನ.21: ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಮೂರನೇ ದಿನದ ಲಕ್ಷದೀಪೋತ್ಸವದ ಪ್ರಯುಕ್ತ ಸೋಮವಾರ ಲಲಿತಾಕಲಾಗೋಷ್ಠಿ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸೇಲಂನ ಮುನಿರತ್ನ ಹಾಗೂ ಚಿತ್ತೂರಿನ ಬಿ.ಎಂ ಶಂಕರಪ್ಪ ತಂಡದವರಿಂದ ‘ನಾಗಸ್ವರವಾದನ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಲಾವಿದರು ದೂರದ ಊರಿನಿಂದ ದೇವಸ್ಥಾನಕ್ಕೆ ಬಂದು ತಮ್ಮ ಕಲೆಯನ್ನು ಪ್ರದರ್ಶಿಸುವ ಮೂಲಕ ಪ್ರತಿವರ್ಷ ಲಕ್ಷದೀಪೋತ್ಸವಕ್ಕೆ ಕಲಾಸೇವೆಯನ್ನು ಸಮರ್ಪಿಸುತ್ತಾರೆ. ಹಲವಾರು ಕಡೆ ‘ನಾಗಸ್ವರವಾದನ’ ನುಡಿಸುವ ಕಲಾವಿದರಿಗೆ ಇಲ್ಲೊಂದು ದೊಡ್ಡ ಅವಕಾಶವೆಂಬ ಹೆಮ್ಮೆಯು ಇದೆ.

ಸತತ ಒಂದು ಘಂಟೆಗಳ ಕಾಲ ನಡೆದ ಕರ‍್ಯಕ್ರಮದಲ್ಲಿ ಸೇಲಂನ ತಂಡದಿಂದ ಮುನಿರತ್ನ ಜೊತೆ ಶಂಕರ್, ತಿರುವೆಂಕಟ (ನಾಗಸ್ವರ), ಮಾದಲಿಂಗಮ್ ಹಾಗೂ ಮಾದೇಶ (ತವಿಲ್) ನಂತರ ಚಿತ್ತೂರಿನ ತಂಡದಿಂದ ಬಿ.ಎಂ ಶಂಕರಪ್ಪ ಜೊತೆ ಸುಬ್ರಮಣ್ಯಮ್ (ತವಿಲ್), ಹೀರಪ್ಪ, ಸೋಮ್ನೇಶ್,ಮಂಜುನಾಥ (ನಾಗಸ್ವರ), ಸುಬ್ರಮಣ್ಯಮ್ ಹಾಗೂ ಪರಾಂದಮ್ (ಸ್ಯಾಕ್ಸೋಫೋನ್) ಸಾಥ್ ನೀಡಿದರು.

ಧರ್ಮಸ್ಥಳ ದೇವಸ್ಥಾನದ ನಾದಸ್ವರ ವಾದಕ ವಿದ್ವಾನ್ ಡಿ.ಅಣ್ಣು ದೇವಾಡಿಗ ಹಾಗೂ ಭಕ್ತಾಭಿಮಾನಿಗಳು ಭಾಗಿಯಾಗಿದ್ದರು. ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ‘ನಾಗಸ್ವರವಾದನ’ ಪ್ರದರ್ಶಿಸಿದ ಎಲ್ಲಾ ಕಲಾವಿದರಿಗೆ ಹಾರ ಹಾಕಿ ಗೌರವಿಸಿದರು. ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುವೀರ್ ಜೈನ್ ವಂದಿಸಿದರು.

ಕ್ರೀಷ್ಮಾ ಆರ್ನೋಜಿ
ಎಸ್.ಡಿ.ಎಂ ಸ್ನಾತಕೋತ್ತರ
ಕೇಂದ್ರ, ಉಜಿರೆ
ಚಿತ್ರ ಕೃಪೆ: ಗ್ಲೆನ್

See also  ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಿವಪ್ರಸಾದ ಅಜಿಲ ಅವರಿಗೆ ಅಭಿನಂದನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು