News Kannada
Monday, February 06 2023

ಮಂಗಳೂರು

ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮ್ ನಲ್ಲಿ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆ ಆಯ್ಕೆ

Bantwal: Tulunadu woman selected to serve in Qatar FIFA World Cup Medical Team
Photo Credit : By Author

ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮ್ ನಲ್ಲಿ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.

ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.
ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸೂರಂಡೆ ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಶ್ರೀಮತಿ ದಂಪತಿಗಳ‌ ಪುತ್ರಿಯಾದ ಪ್ರತಿಭಾ ಅವರು ವಾಮದಪದವು ಸಮೀಪದ ಕುಡಂಬೆಟ್ಟು ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರನ್ನು ವಿವಾಹವಾಗಿದ್ದು, ಸಂಸಾರ ಸಹಿತ ಕಳೆದ ಕೆಲವು ವರ್ಷಗಳಿಂದ ದೋಹಾ ಕತಾರಿನಲ್ಲಿ ನೆಲೆಯಾಗಿದ್ದಾರೆ.

ಪ್ರತಿಭಾ ಎನ್.ದರ್ಖಾಸು ಅವರು ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಕೊರೊನಾ ಸಹಿತ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ ಗೌರವಿಸಲಾಗಿತ್ತು.ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ.

ಈ ಅಪೂರ್ವ ಸೇವೆಗೆ ಆಯ್ಕೆಯಾದ ಪ್ರತಿಭಾ ಎನ್.ದರ್ಖಾಸು ಅವರಿಗೆ ತುಳುನಾಡಿನಾದ್ಯಾಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

See also  ವೇಣೂರು: ಗಣೇಶೋತ್ಸವ ಪರಸ್ಪರ ಬಾಂಧವ್ಯ ಬೆಸೆಯುವ ಹಬ್ಬ- ಪ್ರೊ. ಸುಬ್ರಹ್ಮಣ್ಯ ಎಡಪಡಿತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು