News Kannada
Sunday, January 29 2023

ಮಂಗಳೂರು

ಮಂಗಳೂರು : ಹಿಂದೂ ಯುವತಿ ಜತೆ ಬಸ್ಸಿನಲ್ಲಿ ಕುಳಿತು ಪ್ರಯಾಣಿಸಿದ್ದ ಯುವಕನ ಮೇಲೆ ಹಲ್ಲೆ!

Shivamogga: Clash between two youth groups
Photo Credit : Freepik

ಮಂಗಳೂರು : ಹಿಂದೂ ಯುವತಿಯೊಂದಿಗೆ ಬಸ್‌ನಲ್ಲಿ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸಿದ್ದ ಎಂದು ಆರೋಪಿಸಿ ಯುವಕರ ತಂಡವೊಂದು ವಿದ್ಯಾರ್ಥಿ ಸೈಯದ್‌ ರಶೀಮ್‌ ಉಮರ್‌ (20) ಎಂಬಾತನಿಗೆ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.

ಕಾರ್ಕಳದ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ರಶೀಮ್‌ಗೆ ತಂಡವೊಂದು ನ. 24ರ ಸಂಜೆ ನಂತೂರಿನಲ್ಲಿ ಬಸ್‌ ಒಳಗೆ ನುಗ್ಗಿ ಹಲ್ಲೆ ನಡೆಸಿದೆ.

ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಒಂದೇ ಸೀಟ್‌ನಲ್ಲಿ ಸಹಪಾಠಿಯಾಗಿದ್ದ ಹಿಂದೂ ಯುವತಿ ಜತೆ ಸೈಯದ್‌ ರಶೀಮ್‌ ಉಮರ್‌ ಪ್ರತೀದಿನ ಪ್ರಯಾಣಿಸುತ್ತಿದ್ದ. ಈ ವಿಚಾರದಲ್ಲಿ 3-4 ಮಂದಿ ಅಪರಿಚಿತರು ಬಸ್ಸಿನೊಳಗೆ ನುಗ್ಗಿ ಏಕಾಏಕಿಯಾಗಿ ಆತನನ್ನು ಎಳೆದು ಹಾಕಿ ಹಲ್ಲೆ ನಡೆಸಿದ್ದಾರೆ.

ಅಷ್ಟರಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸರು ಬಂದು ಹೆಚ್ಚಿನ ಹಲ್ಲೆಯಾಗುವುದನ್ನು ತಪ್ಪಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಂಡ ಹಲ್ಲೆ ನಡೆಸಿದ್ದಲ್ಲದೆ ಬಸ್ಸಿನಿಂದ ಕೆಳಗೆ ಇಳಿಸಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೈಯದ್‌ ರಶೀಮ್‌ ಉಮರ್‌ ದೂರಿನಲ್ಲಿ ತಿಳಿಸಿದ್ದಾರೆ. ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಹಾಡು ಸಂತೋಷಕ್ಕೆ ಸೀಸನ್ 2 ರ ಎರಡನೇ ಸಂಚಿಕೆ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು