News Kannada
Monday, February 06 2023

ಮಂಗಳೂರು

ಬೆಳ್ತಂಗಡಿ: ನೇತ್ರಾವತಿ ಬಚಾವೋ ಆಂದೋಲನ ಸಮಿತಿ ವತಿಯಿಂದ ಸಮಾವೇಶ

Netravathi Bachao Andolan Samiti organises rally
Photo Credit : By Author

ಬೆಳ್ತಂಗಡಿ: ನೇತ್ರಾವತಿ ಬಚಾವೋ ಆಂದೋಲನ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಮಾವೇಶವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಪ್ರಧಾನ ಸಂಚಾಲಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ ರವರು ” ನಮ್ಮ ಜಿಲ್ಲೆಯ ಜೀವನದಿ ನೇತ್ರಾವತಿ ನದಿಯ ಮೇಲೆ ವ್ಯವಸ್ಥಿತವಾಗಿ ಅತ್ಯಾಚಾರ ನಡೆಯುತ್ತಿದ್ದಾಗ ಸುಮ್ಮನಿರುವುದು ಸರಿಯಲ್ಲ, ಇದರ ವಿರುದ್ಧ ಹೋರಾಟ ನಡೆಸುವುದು ನಮ್ಮ ಕರ್ತವ್ಯ ಎಂದರು.

ಇದರ ಜೊತೆಗೆ 40% ಕಮಿಷನ್, ಭೃಷ್ಟಾಚಾರ, ಅಕ್ರಮ-ಸಕ್ರಮ ಯೋಜನೆಯ ಪಕ್ಷಪಾತ, ಕಸ್ತೂರಿರಂಗನ್ ವರದಿ ವಿರುದ್ಧ, ನಿವೇಶನ- ವಸತಿ ಸೌಕರ್ಯಕ್ಕಾಗಿ, ಕುದುರೆಮುಖ ರಾಷ್ಟ್ರೀಯ ಉದ್ಯಾನವನವಾಸಿಗಳಿಗೆ ಮೂಲಭೂತ ಸೌಕರ್ಯಗಳಿಗಾಗಿಯೂ ಈ ಹೋರಾಟ ನಡೆಯಲಿದೆ. ಇದೊಂದು ತಾಲೂಕಿನ ಐತಿಹಾಸಿಕ ಹೋರಾಟ, ಈ ಹೋರಾಟ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ ಎಂದ ಅವರು ಈ ಕಾಲ್ನಡಿಗೆ ಜಾಥವನ್ನು ಯಶಸ್ವಿಗೊಳಿಸಲು ಗ್ರಾಮ ಗ್ರಾಮಗಳಲ್ಲಿ ದುಡಿಯುವ ಅಗತ್ಯವಿದೆ ಎಂದರು.

ಸಭೆಯನ್ನು ಉದ್ದೇಶಿಸಿ ಮಾಜಿ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್ , ಕೆ.ಕೆ ಶಾಹುಲ್ ಹಮೀದ್ ಮಾತನಾಡಿದರು. ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಾವಿರಾರು ಜನರು ಸಮಾವೇಶದಲ್ಲಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಸಂಚಾಲಕರಾದ ಶೇಖರ್ ಕುಕ್ಕೇಡಿ , ಕೆ.ಕೆ ಶಾಹುಲ್ ಹಮೀದ್ , ಧರಣೇಂದ್ರ ಕುಮಾರ್ , ನಮೀತಾ ಪೂಜಾರಿ ಉಪಸ್ಥಿತರಿದ್ದರು.

ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ ಕಾರ್ಯಕ್ರಮ ನಿರ್ವಹಿಸಿದರು.

See also  ಬೆಳ್ತಂಗಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ದಾನದಲ್ಲಿ ವರಮಹಾಲಕ್ಷ್ಮೀ ಪೂಜೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು