ಮಂಗಳೂರು: ಆದಿ ಸ್ಥಳ ಮತ್ತು ತುಳುನಾಡು ಹೊರತುಪಡಿಸಿ ಕೊರಗಜ್ಜನ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಕೊರಗಜ್ಜನ ಆದಿಸ್ಥಳ ಬಿಟ್ಟು ಬೇರೆ ಕಡೆ ಆರಾಧನೆ ಮಾಡುತ್ತಿರೋದು ವ್ಯವಹಾರದ ಉದ್ದೇಶವಾಗಿದೆ. ಇದನ್ನ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕರಾವಳಿಯ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.
ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿವೆ. ದೈವಾರಾಧನೆ ವಿರುದ್ಧ ಮಂಗಳೂರಿನ ಜನ ಸಿಡಿದೆದ್ದಿದ್ದಾರೆ. ಹಿಂದೂ ಸಂರಕ್ಷಣಾ ಸಮಿತಿ, ಮಂಗಳೂರು ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ.
ಮೈಸೂರು ಮೂಲದ ಕೆಲ ಭಕ್ತರೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆದಿ ಸ್ಥಳ ಮತ್ತು ತುಳುನಾಡು ಹೊರತುಪಡಿಸಿ ಕೊರಗಜ್ಜನ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಕೊರಗಜ್ಜನ ಆದಿಸ್ಥಳ ಬಿಟ್ಟು ಬೇರೆ ಕಡೆ ಆರಾಧನೆ ಮಾಡುತ್ತಿರೋದು ವ್ಯವಹಾರದ ಉದ್ದೇಶವಾಗಿದೆ. ಇದನ್ನ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕರಾವಳಿಯ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.