ಬಂಟ್ವಾಳ: ಇದೇ ಮೊದಲ ಬಾರಿಗೆ ಆಯೋಜನೆಯಾದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜಂಪ್ ರೋಪ್ ಸ್ಪರ್ಧೆಯು ತಾಲೂಕಿನ ಪೊಳಲಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಕಾರ್ಯಾಧ್ಯಕ್ಷ ವೆಂಕಟೇಶ ನಾವುಡ ವಹಿಸಿದ್ದರು. ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಉದ್ಘಾಟನೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ರವಿಶಂಕರ್, ಪ್ರಮುಖರಾದ ಯಶವಂತ ಪೂಜಾರಿ, ಪ್ರೇಮನಾಥ ಶೆಟ್ಟಿ, ನವೀನ್ , ರತ್ನಾವತಿ, ಸಂತೋಷ್, ಸುಬ್ರಾಯ ಕಾರಂತ್ , ಶಿಕ್ಷಣ ಸಂಯೋಜಕಿ ಪ್ರತಿಭಾ ಉಪಸ್ಥಿತರಿದ್ದರು.