News Kannada
Friday, February 03 2023

ಮಂಗಳೂರು

ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಪಲ್ಟಿ!

Photo Credit : By Author

ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಅಪಘಾತದಿಂದಾಗಿ ಆಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ ಎಂದು ಮಾಹಿತಿ ಲಭಿಸಿದೆ. ಈ ಪೈಕಿ ವೈದ್ಯ ಡಾ.‌‌ನಿತಿನ್ ಅವರಿಗೆ ಕೈಯ್ಯ ಮೂಳೆ‌ಮುರತಕ್ಕೊಳಗಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಾದ ಇನ್ನಿಬ್ಬರು ಆಸ್ಪತ್ರೆಯ ಸಿಬ್ಬಂದಿಗಳಾದ ರಿತೇಶ್ ಮತ್ತು ಹುಝೈರ್ ಎಂಬವರೆಂದು ಗೊತ್ತಾಗಿದೆ. ಈ ಪೈಕಿ ಹುಝೈರ್ ವಾಹನ‌ ಚಲಾಯಿಸುತ್ತಿದ್ದರು ಎಂಬುದು ಪ್ರಾಥಮಿಕ ಮಾಹಿತಿ. ಇವರಿಬ್ಬರೂ ಕೂಡ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅಂಬುಲೆನ್ಸ್ ನ ಚಾಲಕ ಬೇರೆಯೇ ಇದ್ದು, ಇವರು ಮೆಡಿಸಿನ್ ಪಾರ್ಸೆಲ್ ವಿಚಾರವಾಗಿ ವಾಹನದಲ್ಲಿ ಬೆಳ್ತಂಗಡಿಗೆ ಬಂದಿದ್ದರು ಎಂದು ಗೊತ್ತಾಗಿದೆ. ಅಪಘಾತದ ಕಾರಣಕ್ಕೆ ಬೊಲೆರೋ ಅಂಬುಲೆನ್ಸ್ ವಾಹನ ಬಹುತೇಕ ನುಜ್ಜುಗುಜ್ಜಾಗಿದೆ.

ಘಟನೆಯಿಂದ ಸುಮಾರು ಅರ್ಧ ತಾಸು ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ತಕ್ಷಣ ಸ್ಪಂದಿಸಿದ ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ನಾಗರಿಕರ ಸಹಕಾರದಿಂದ ಅಗತ್ಯ ಕಾರ್ಯಾಚರಣೆ ನಡೆಸಿದ್ದಾರೆ.

See also  ಬೆಂಗಳೂರಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ ಕಬ್ಬನ್ ಪಾರ್ಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು