News Kannada
Monday, January 30 2023

ಮಂಗಳೂರು

ಪುತ್ತೂರು: ಅನಧಿಕೃತ ಓಟರ್ ಐಡಿ ವಿತರಣೆ ಆರೋಪ- ತಹಶೀಲ್ದಾರ್‌ರವರಿಂದ ಜನಸೇವಾ ಕೇಂದ್ರದ ಮೇಲೆ ದಾಳಿ!

Photo Credit : News Kannada

ಪುತ್ತೂರು: ಅನಧಿಕೃತವಾಗಿ ಮತದಾರನ ಗುರುತಿನ ಚೀಟಿಯನ್ನು ವಿತರಣೆ ಮಾಡಿದ ಆರೋಪ ಬಂದಿರುವ ಹಿನ್ನೆಲೆಯಲ್ಲಿ ತಾಲೂಕು ಕಚೇರಿಯ ರಸ್ತೆಯ ಜನಸೇವಾ ಕೇಂದ್ರವೊಂದರ ಮೇಲೆ ಎಸಿ, ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಅಂಗಡಿಗೆ ಬೀಗ ಹಾಕಿದ ಘಟನೆ ಮುಟ್ಟುಗೋಲು ಹಾಕಿರುವ ಘಟನೆ ಡಿ.೫ರಂದು ಸಂಜೆ ನಡೆದಿದೆ.

ಮಂಜಲ್ಪಡ್ಪುವಿನ ನಿವಾಸಿಯೊಬ್ಬರ ಮಗನ ಮತದಾರರ ಗುರುತಿನ ಚೀಟಿ ಕಳೆದುಹೋಗಿದ್ದು, ಅವರು ಜನ ಸೇವಾ ಕೇಂದ್ರಕ್ಕೆ ಬಂದು ವಿಷಯ ತಿಳಿಸಿ ಓಟರ್ ಐಡಿ ಮತ್ತೆ ಪಡೆಯುವ ನಿಟ್ಟಿನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಕೇಂದ್ರದಲ್ಲೇ ಗುರುತಿನ ಚೀಟಿ ಮುದ್ರಿಸಿ ಕೊಡಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಜನ ಸೇವಾ ಕೇಂದ್ರದಿಂದ ಪಡೆದ ಗುರುತಿನ ಚೀಟಿಯ ಮೇಲೆ ಅನುಮಾನ ಬಂದ ಕಾರಣ ಅವರು ತಾಲೂಕು ಕಚೇರಿಯ ಚುನಾವಣಾ ಶಾಖೆಗೆ ತೆರಳಿ ಅಧಿಕಾರಿಗಳಿಗೆ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಅಧಿಕಾರಿಗಳು ತಪಾಸಣೆ ನಡೆಸಿದಾಗ ಹೊರಗಿನ ಕೇಂದ್ರದಲ್ಲಿ ಓಟರ್ ಐಡಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿ ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಭಾರತ ಚುನಾವಣಾ ಆಯೋಗದ ಹೆಸರಿರುವ ಸ್ಮಾರ್ಟ್ ಕಾರ್ಡ್ ಮಾದರಿಯ ನೂರಾರು ಕಾಲಿ ಕಾರ್ಡ್‌ಗಳು ಪತ್ತೆಯಾಗಿದೆ.

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಸಹಾಯಕ ಆಯುಕ್ತರು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಅಪರಾಧ ಮಾಡಿರುವುದು ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಬಾಹ್ಯ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿ ವಿತರಣೆ ಮಾಡುವ ಅಧಿಕಾರವನ್ನು ನಾವು ಯಾರಿಗೂ ಕೊಟ್ಟಿಲ್ಲ. ಆದರೂ ಈ ಕೇಂದ್ರದಲ್ಲಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಕಾಡ್೯ ವಶಪಡಿಸಿಕೊಂಡು ಕೇಂದ್ರಕ್ಕೆ ಬೀಗ ಹಾಕಿದ್ದೇವೆ. ತನಿಖೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ತಿಳಿಸಿದ್ದಾರೆ.

ನಮ್ಮ ಜನಸೇವಾ ಕೇಂದ್ರದಲ್ಲಿ ನಿರ್ದಿಷ್ಟ ವೆಬ್‌ಸೈಟ್ ತೆರೆದುಕೊಂಡ ಕಾರಣ ನಮ್ಮ ಸಿಬ್ಬಂದಿ ಅದರಲ್ಲಿ ಲಾಗಿನ್ ಆಗಿ ಅದರಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಸಿ ಕಾಡ್೯ ಮುದ್ರಿಸಿ ಕೊಟ್ಟಿದ್ದಾರೆ. ಇದರ ಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಗೆ ಪ್ರಾಯೋಗಿಕವಾಗಿ ಮಾಡಿ ತೋರಿಸಿದ್ದೇವೆ. ಇದರಲ್ಲಿ ನಮ್ಮ ತಪ್ಪೇನೂ ಇಲ್ಲ. ಸರಕಾರಿ ಅಧಿಕಾರಿಗಳ, ಚುನಾವಣಾ ಆಯೋಗದ ಅಧಿಕಾರಿಗಳ ಸಹಿ ಫೋರ್ಜರಿ ಮಾಡಲು ನಮಗೆ ಸಾಧ್ಯವೇ? ನಾವು ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿಲ್ಲ ಎಂದು ಕೇಂದ್ರದ ಮಾಲಕಿ ಈ ಸಂದರ್ಭ ತಿಳಿಸಿದರು.

ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ನಿಸರ್ಗಪ್ರಿಯ, ಉಪ ತಹಶೀಲ್ದಾರ್, ಕಂದಾಯ ನಿರೀಕ್ಷಕರು, ಗ್ರಾಮಕರಣಿಕರು, ಗ್ರಾಮ ಸಹಾಯಕರು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು. ನಗರ ಠಾಣಾ ಎಸ್‌ಐ ಶ್ರೀಕಾಂತ್ ರಾಥೋಡ್ ಹಾಗೂ ಸಿಬಂದಿಗಳು ಬಂದೋ ಬಸ್ತ್ ಒದಗಿಸಿದ್ದರು.

See also  ಜಮ್ಮು ಮತ್ತು ಕಾಶ್ಮೀರ: ಇಬ್ಬರು ಹಿಜ್ಬುಲ್ ಭಯೋತ್ಪಾದಕರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು