News Kannada
Friday, February 03 2023

ಮಂಗಳೂರು

ಬಂಟ್ವಾಳ: ಕಟೀಲು ಮೇಳದ ಚೌಕಿ ಸಹಾಯಕ ಹೃದಯಾಘಾತದಿಂದ ನಿಧನ

Bantwal: Chowki assistant of Kateel Mela dies of heart attack
Photo Credit : By Author

ಬಂಟ್ವಾಳ: ಕಟೀಲು ಮೇಳದ ಚೌಕಿ ಸಹಾಯಕರೊಬ್ಬರು ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ.

ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ, ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ ಅಚ್ಯುತ ನಾಯಕ್ (45)ನಿಧನರಾದವರು.

ಪ್ರಸ್ತುತ ಕಟೀಲು ಮೇಳವು ಕಾಲಮಿತಿ ಯಕ್ಷಗಾನವಾಗಿದ್ದು, ಸೋಮವಾರ ರಾತ್ರಿ 1ಗಂಟೆಯ ಸುಮಾರಿಗೆ ಯಕ್ಷಗಾನ ಮುಗಿದು ಪರಿಕರಗಳನ್ನು ಲಾರಿಗೆ ಜೋಡಿಸುತ್ತಿದ್ದ ವೇಳೆ ಏಕಾಏಕಿ ಉಸಿರುಗಟ್ಟಿದಂತಾಗಿ ಅಸ್ವಸ್ಥತೆಗೊಂಡಿದ್ದಾರೆ. ತಕ್ಷಣ ಅವರನ್ನು ಬಿ.ಸಿ.ರೋಡಿಗೆ ಕರೆದುಕೊಂಡು ಬರಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆಕರೆದೊಯ್ಯುವ ವೇಳೆ ಅವರು ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.

ಕಳೆದ ಹಲವು ವರ್ಷಗಳಿಂದ ಕಟೀಲು ಮೇಳದ ಚೌಕಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಈ. ಹಿಂದೆ ಸರಪಾಡಿ ಸೇರಿದಂತೆ ಹಲವೆಡೆ ಸಣ್ಣ ಹೋಟೆಲ್ ನಡೆಸುತ್ತಿದ್ದರು , ಜೊತೆಗೆ ಅಡುಗೆ ಕೆಲಸಕ್ಕೂ ಹೋಗುತ್ತಿದ್ದರು.

See also  ಬಂಟ್ವಾಳ ತಾಲೂಕು ಮಟ್ಟದ ಕಡತ ವಿಲೇವಾರಿ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು