News Kannada
Monday, January 30 2023

ಮಂಗಳೂರು

ಚಾರ್ಮಾಡಿ ಘಾಟಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯ

Photo Credit : By Author

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯವಾದ ಘಟನೆ ಡಿ.7 ರಂದು ರಾತ್ರಿ ನಡೆದಿದೆ.

ಬುಧವಾರ ರಾತ್ರಿ ಸುಮಾರು 10:30ರ ವೇಳೆಗೆ ಈ ಘಟನೆ ಸಂಭವಿಸಿದ್ದು,ಬೈಕ್ 7 ನೇ ತಿರುವಿನಿಂದ 6 ನೇ ತಿರುವಿಗೆ ಉರುಳಿ ಬಿದ್ದಿದೆ.ಅಪಘಾತದ ತೀವ್ರತೆಗೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿಗಳಾದ ಯುವರಾಜ್(20), ಆನಂದ ಬಾಬು(29), ಅನಿಲ್ ಕುಮಾರ್(28) ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಮೂವರು ಊರಿಂದ ವಾಪಾಸು ಬರುತ್ತಿರುವಾಗ ಈ ಘಟನೆ ಸಂಭವಿಸಿದೆ.

ಗಾಯಾಳುಗಳಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಬಂಟ್ವಾಳ: ಶಿಕ್ಷಣ ನೀತಿಯಲ್ಲಿ ಶಾಸ್ತ್ರ, ಸಾಹಿತ್ಯಕ್ಕೆ ಆದ್ಯತೆ ಸಿಗಬೇಕು ಎಂದ ಶ್ರೀಧರ ಕೆ.ಅಳಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು