News Kannada
Tuesday, January 31 2023

ಮಂಗಳೂರು

ಬಂಟ್ವಾಳ : ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗದುಹಾಕಿ ಅನ್ಯಾಯ ಮಾಡಲಾಗುತ್ತಿದೆ!

Photo Credit : By Author

ಬಂಟ್ವಾಳ : ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗದುಹಾಕಿ ಅನ್ಯಾಯ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

ಅವರು ಬಂಟ್ವಾಳ ತಹಶಿಲ್ದಾರ್ ಡಾ.ಸ್ಮಿತಾರಾಮು ಅವರನ್ನು ಬೇಟಿಯಾಗಿ ಸಹಾಯಕ ಆಯಕ್ತರಿಗೆ ಮನವಿ ಸಲ್ಲಿಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದರು. ಯಾವುದೇ ಕಾರಣಕ್ಕೂ ಅರ್ಹ ಮತದಾರರನ್ನು ಪಟ್ಟಿಯಿಂದ ಕಳಚಬಾರದು ಎಂದು ಅವರು ಒತ್ತಾಯಿಸಿದರು.

ಚುನಾವಣಾ ಆಯೋಗದ ಮೂಲಕ ಸೇರ್ಪಡೆ ಮತ್ತು ಕಳಚುವ ಬಗ್ಗೆ ಮಾರ್ಗದರ್ಶಿ ಸೂತ್ರದಂತೆ ಸ್ಥಳೀಯ ಮಟ್ಟದ ಮತಗಟ್ಟೆಯ ಬಿ.ಎಲ್.ಒ.ಗಳು ಪಾರದರ್ಶಕವಾಗಿ ಕಾರ್ಯನಿರ್ವಾಹಿಸುವ ಬಗ್ಗೆ ವಿಶ್ವಾಸ ವಿದೆ , ಆದರೆ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಗಳು ತಮಗೆ ಬೇಕಾದ ರೀತಿಯಲ್ಲಿ ಹೆಸರುಗಳನ್ನು ಕಳಚುವಂತೆ ಬಿ.ಎಲ್.ಒ.ಗಳಿಗೆ ಒತ್ತಡ ಹೇರುವ ವಿಚಾರ ಗಮನಕ್ಕೆ ಬಂದಿದೆ.

ಯಾವುದೇ ಒತ್ತಡಕ್ಕೆ ಮಣಿಯದೆ ಪ್ರಭಾವಕ್ಕೆ ಒಳಗಾಗದೆ ಕಾರ್ಯನಿರ್ವಹಿಸಲು ಬಿ.ಎಲ್‌.ಒ.ಗಳಿಗೆ ಸೂಚನೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷ ಮಹಮ್ಮದ್ ಶೆರೀಫ್, ಪ್ರಮುಖ ರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸುದೀಪ್ ಶೆಟ್ಟಿ ಮಾಣಿ, ಪಿಯೂಸ್ ಎಲ್ ರೋಡ್ರಿಗಸ್, ಪದ್ಮನಾಭ ರೈ, ಅಬ್ಬಾಸ್ ಆಲಿ, ವೆಂಕಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

See also  ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ದೇಶಕ್ಕೆ ಮಾಡಿದ ಅವಮಾನ : ನಳಿನ್ ಕುಮಾರ್ ಕಟೀಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು