News Kannada
Monday, February 06 2023

ಸಾಂಡಲ್ ವುಡ್

ಮಂಗಳೂರು: ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ

Mangaluru: Actor Shivarajkumar's family visits Koragajjana Adisthalam in Kuttaru
Photo Credit : News Kannada

ಉಳ್ಳಾಲ: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣೀಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರು ದೆಕ್ಕಾಡಿಗೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದರು.

ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಮಂಗಳೂರಿಗೆ ಆಗಮಿಸಿರೋ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಶಿವರಾಜ್ ಆಗಮಿಸಿದ್ದು ನಟಿ ರಕ್ಷಿತಾ ಪ್ರೇಮ್ ಸಲಹೆಯ ಮೇರೆಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.ಇವತ್ತು ವೇದಾ ಈವೆಂಟ್ ಇರೋ ಕಾರಣ ಮಂಗಳೂರಿಗೆ ಬಂದಿದ್ದೇನೆ.ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕೊರಗಜ್ಜ ಕ್ಷೇತ್ರಕ್ಕೆ ಬಂದಿದ್ದೇನೆ.ಕೊರಗಜ್ಜನ ‌ಕ್ಷೇತ್ರದ ಕಾರಣಿಕದ ಬಗ್ಗೆ ನನಗೆ ರಕ್ಷಿತಾ ಅನೇಕ ಬಾರಿ ಹೇಳಿದ್ದರು.ಮನುಷ್ಯನ ಸಮಸ್ಯೆಯನ್ನ ಬಹಳ ಸರಳವಾಗಿ ಹೇಳುವ ರೀತಿ ಈ ಕ್ಷೇತ್ರದ್ದಾಗಿದೆ.ಯಾವುದೇ ಆಡಂಬರ ಇಲ್ಲದೇ ಜನರು ಪ್ರಾರ್ಥನೆ ಮಾಡಲು ಇಲ್ಲಿ ಅವಕಾಶ ಇದೆ.ಕೊರಗಜ್ಜನಿಗೆ ವೀಲ್ಯದೆಲೆ ಮತ್ತು ಶರಾಬು ಕೊಟ್ಟು ಪ್ರಾರ್ಥನೆ ಮಾಡುವ ಸರಳ ವಿಧಾನ ಖುಷಿ ಕೊಟ್ಟಿತು.ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ,ಆಗೋದು ಬಿಡೋದು ದೈವದ ಇಚ್ಛೆ,ದೈವದೆದುರು ಶ್ರದ್ಧೆಯಿಂದ ಬೇಡುವುದು ನಮ್ಮ ಕಾರ್ಯ ಎಂದರು.

ರಕ್ಷಿತಾ ಪ್ರೇಮ್ ಅವರು ಈ ಹಿಂದೆ ಕುತ್ತಾರಿಗೆ ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದ್ದರು.

See also  ಮಂಗಳೂರು: ಸ್ಥಾಪಕ ಧರ್ಮಗುರುಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು